ದೊಡ್ಡಬಳ್ಳಾಪುರ: ನಗರದಲ್ಲಿ ಸಂಚರಿಸಲಿರುವ ಆಟೋಗಳಿಗೆ ಪೊಲೀಸ್ ಠಾಣೆ ವತಿಯಿಂದ ಕ್ರಮ ಸಂಖ್ಯೆಗಳನ್ನು ನೀಡುವುದಕ್ಕೆ ನಗರ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ಸೋಮಶೇಖರ್ ಮಂಗಳವಾರ ಚಾಲನೆ ನೀಡಿದರು.
ಅವರು ಈ ಬಗ್ಗೆ ಮಾಹಿತಿ ನೀಡಿ, ನಗರ ವ್ಯಾಪ್ತಿಯಲ್ಲಿ ಸಂಚರಿಸುವ ಆಟೋ ಚಾಲಕರ ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆ, ವಿಳಾಸ, ಆಟೋ ದಾಖಲಾತಿಗಳನ್ನು ಪಡೆದು ಪೊಲೀಸ್ ಠಾಣೆ ವತಿಯಿಂದ ಕ್ರಮ ಸಂಖ್ಯೆಗಳನ್ನು ನೀಡಲಾಗುತ್ತಿದೆ. ಇದರಿಂದ ಆಟೋ ಚಾಲಕರು ಸರ್ಕಾರದ ಯೋಜನೆಗಳನ್ನು ಪಡೆಯಲು, ಪ್ರಯಾಣಿಕರಿಗೆ ತೊಂದರೆಯಾದಾಗ ತುರ್ತಾಗಿ ಗುರುತಿಸಲು ಅನುಕೂಲವಾಗಲಿದೆ. ಎಲ್ಲಾ ಆಟೋ ಚಾಲಕರು ಸೂಕ್ತ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ನೀಡಿ ಕ್ರಮ ಸಂಖ್ಯೆಗಳನ್ನು ಕಡ್ಡಾಯವಾಗಿ ಪಡೆಯಬೇಕು ಎಂದರು.
4ನೇ ಹಂತದ ಲಾಕ್ಡೌನ್ ಜಾರಿಯಲ್ಲಿ ಕೆಲವೊಂದು ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ. ಇವುಗಳಲ್ಲಿ ಆಟೋ ಸಂಚಾರಕ್ಕು ಅವಕಾಶ ನೀಡಲಾಗಿದೆ. ಆಟೋದಲ್ಲಿ ಇಬ್ಬರು ಪ್ರಯಾಣಿಕರು ಮಾತ್ರ ಸಂಚರಿಸಲು ಅನುಮತಿ ನೀಡಲಾಗಿದೆ. ವೃದ್ದರು, ಗರ್ಭೀಣಿಯರು, 10 ವರ್ಷದ ಒಳಗಿನ ಮಕ್ಕಳನ್ನು ಆಟೋಗಳಲ್ಲಿ ಕರೆದೊಯ್ಯುವಂತಿಲ್ಲ. ಆರೋಗ್ಯದ ತುರ್ತು ಸಂದರ್ಭದ ಸಮಯದಲ್ಲಿ ಮಾತ್ರ ವೃದ್ದರು, ಗರ್ಭೀಣಿಯರು,ಮಕ್ಕಳನ್ನು ಕರೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಆದರೆ ಈ ಅವಕಾಶವನ್ನು ದುರುಪಯೋಗಪಡಿಸಿಕೊಂಡರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ನಗರ ಪೊಲೀಸ್ ಠಾಣೆ ಅಪರಾಧ ವಿಭಾಗದ ಸಬ್ಇನ್ಸ್ಪೆಕ್ಟರ್ ರಂಗನಾಥ್ ಇದ್ದರು.