Site icon Harithalekhani

ಸಿಂಗಾಪುರ್ ನಿಂದ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ 148 ಪ್ರಯಾಣಿಕರು

ದೊಡ್ಡಬಳ್ಳಾಪುರ : ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಸಿಂಗಾಪುರ್ ನಿಂದ ಇಂದು ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹದಿಮೂರನೇ ಏರ್ ಇಂಡಿಯಾ ವಿಮಾನದಲ್ಲಿ 148 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. 

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 148 ಮಂದಿ ಪ್ರಯಾಣಿಕರಲ್ಲಿ ಇಬ್ಬರು ಗರ್ಭಿಣಿ ಮಹಿಳೆಯರು, ಇಬ್ಬರು ಮಕ್ಕಳು ಸೇರಿದಂತೆ 82 ಪುರುಷರು ಮತ್ತು 66 ಮಹಿಳೆಯರು ಇದ್ದಾರೆ. 

ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 148 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ. 

148 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

Exit mobile version