ದೇವನಹಳ್ಳಿ : ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಜರ್ಮನಿಯ ಫ್ರಾಂಕ್ಫರ್ಟ್ ನಿಂದ ಇಂದು ಮಧ್ಯಾನ್ಹ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಪ್ಪತ್ನಾಲ್ಕನೇ ಏರ್ ಇಂಡಿಯಾ ವಿಮಾನದಲ್ಲಿ 248 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.
ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 248 ಮಂದಿ ಪ್ರಯಾಣಿಕರಲ್ಲಿ ಒಂದು ಮಗು ಸೇರಿದಂತೆ 159 ಪುರುಷರು ಮತ್ತು 89 ಮಹಿಳೆಯರು ಇದ್ದಾರೆ.
ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 248 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ.
248 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.