Site icon Harithalekhani

ಯುವಕನಲ್ಲಿ ಕರೊನಾ ಸೋಂಕು ಪತ್ತೆ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ನೆಲಮಂಗಲ ತಾಲ್ಲೂಕಿನ ಕಸಬಾ ಹೋಬಳಿಯ ಬಾಣಸವಾಡಿ ಗ್ರಾಮದ 18 ವರ್ಷದ ಒಬ್ಬ ಯುವಕನಲ್ಲಿ ಇಂದು ಕರೊನಾ ವೈರಾಣು ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

ಸೋಂಕಿತ ಯುವಕ (ಪಿ-2822), ಪಿ-1815ರ ಸಂಪರ್ಕ ಹೊಂದಿದ್ದು, ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕು ಆಸ್ಪತ್ರೆಯಲ್ಲಿ ಕರೊನಾ ವೈರಾಣು ಸೋಂಕು ಆರೋಗ್ಯ ತಪಾಸಣೆಗೊಳಪಟ್ಟ ಸಂದರ್ಭದಲ್ಲಿ ಸೋಂಕು ದೃಢಪಟ್ಟಿದೆ.    

ಸೋಂಕಿತ ವ್ಯಕ್ತಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

Exit mobile version