Site icon Harithalekhani

ಮುಂಬೈವಾಸಿ ದೊಡ್ಡಬಳ್ಳಾಪುರ ನಗರದ ವ್ಯಕ್ತಿಗೆ ಕರೊನಾ ಸೋಂಕು

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಒಬ್ಬ ವ್ಯಕ್ತಿಯಲ್ಲಿ ಇಂದು ಕೊರೋನಾ ವೈರಾಣು ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ಪಟ್ಟಣ ನಿವಾಸಿಯಾದ 29 ವರ್ಷದ ವ್ಯಕ್ತಿ (ಪಿ-3991), ಮಹಾರಾಷ್ಟ್ರ ರಾಜ್ಯದಿಂದ ಹಿಂದಿರುಗಿದವರಾಗಿದ್ದಾರೆ.

ಮಹಾರಾಷ್ಟ್ರದಿಂದ ವಿಮಾನದಲ್ಲಿ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇವರನ್ನು ಹೋಟೆಲ್ ನಲ್ಲಿ ಕ್ವಾರಂಟೈನ್ ನಲ್ಲಿರಿಸಲಾಗಿತ್ತು. ಈ ಸಂದರ್ಭದಲ್ಲಿ ಕೊರೋನಾ ವೈರಾಣು ಸೋಂಕಿನ ಆರೋಗ್ಯ ತಪಾಸಣೆಗೊಳಪಟ್ಟಾಗ ಸೋಂಕು ದೃಢಪಟ್ಟಿದೆ.

ಸೋಂಕಿತ ವ್ಯಕ್ತಿ ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

ಅದೃಷ್ಟವಶಾತ್ ಆತನನ್ನು ಮನೆಗೆ ಕಳಿಸದೆ ಕ್ವಾರಂಟೈನ್ ಮಾಡಿದ್ದರಿಂದ ಸೋಂಕು ಇತರರಿಗೆ ಹರಡುವುದು ತಪ್ಪಿದೆ.

Exit mobile version