ವಿವಾದಗಳಿಗೆ ಅವಕಾಶ ನೀಡದಂತೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಬೇಕು: ಎಸ್. ಸುರೇಶ್ ಕುಮಾರ್

ಹಾಸನ : ರಾಜ್ಯಾದ್ಯಂತ ಜೂ. 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯು ಆರಂಭವಾಗಲಿದ್ದು, ಯಾವುದೇ ರೀತಿಯ ವಿವಾದಗಳಿಗೆ ಅವಕಾಶ ನೀಡದೆ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಅವರ ಆತ್ಮಸ್ಥೈರ್ಯ ಹೆಚ್ಚಿಸಲು ಜಿಲ್ಲಾಡಳಿತಗಳು ಪಣ ತೊಡಬೇಕು ಎಂದು ಶಿಕ್ಷಣ ಸಚಿವರಾದ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಇತರೆ ಸಂಬಂಧಪಟ್ಟ ಅಧಿಕಾರಿಗಳೊಡನೆ ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಎಸ್.ಎಸ್.ಎಲ್.ಸಿ ಪರೀಕ್ಷೆಯ ಕುರಿತಾಗಿ  ಹೈಕೋರ್ಟ್ ನೀಡಿರುವ ಸೂಚನೆಗಳನ್ನು ಚಾಚೂ ತಪ್ಪದೆ ನಾವೆಲ್ಲರೂ ಪಾಲಿಸಬೇಕು ಎಂದರು.

ರಾಜ್ಯಾದ್ಯಂತ ಒಟ್ಟು 2,879 ಪರೀಕ್ಷಾ ಕೇಂದ್ರಗಳಿದ್ದು, 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೋವಿಡ್ ಸಂದರ್ಭದಲ್ಲಿ 70 ಪರೀಕ್ಷಾ ಕೇಂದ್ರಗಳನ್ನು ಕ್ವಾರಂಟೈನ್ ಕೇಂದ್ರಗಳನ್ನಾಗಿ ಮಾಡಲಾಗಿತ್ತು, ಅವುಗಳನ್ನು ತೆರವುಗೊಳಿಸಿ ಸ್ಯಾನಿಟೈಸ್ ಮಾಡಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಚಿವರು ಸೂಚಿಸಿದರಲ್ಲದೆ, ಪರೀಕ್ಷೆಗೆ 2 ದಿನಗಳ ಮುಂಚಿತವಾಗಿ ಹಾಗೂ ಪರೀಕ್ಷೆ ಪ್ರಾರಂಭವಾದ ನಂತರ ಪ್ರತಿದಿನ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಿಸಬೇಕು ಎಂದರು.

ಸುಮಾರು 12,674 ವಿದ್ಯಾರ್ಥಿಗಳು ಹೊರರಾಜ್ಯಗಳಿಂದ ಬಂದ ವಲಸೆ ಕಾರ್ಮಿಕರ ಮಕ್ಕಳಾಗಿದ್ದು, ಅವರು ಪರೀಕ್ಷೆ ಬರೆಯಲು ಸ್ಥಳೀಯ ಪರೀಕ್ಷಾ ಕೇಂದ್ರಗಳಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.

ಪರೀಕ್ಷೆ ಬರೆಯಲು ಬರುವ ಮಕ್ಕಳಿಗೆ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಮೂಲಕ ಆರೋಗ್ಯ ತಪಾಸಣೆ ಮಾಡಬೇಕು. ಈ ಸಂದರ್ಭದಲ್ಲಿ ಗೊಂದಲವಾಗದಂತೆ ಪ್ರತಿ 200 ಮಕ್ಕಳಿಗೆ ಒಂದು ಥರ್ಮಲ್ ಸ್ಕ್ರೀನಿಂಗ್ ಯಂತ್ರವನ್ನು ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ 3.1/2 ಅಡಿ ಅಂತರ ಕಾಯ್ದುಕೊಳ್ಳುವಂತೆ ಬೆಂಚ್‍ಗಳನ್ನು ವ್ಯವಸ್ಥಿತವಾಗಿ ಅಳವಡಿಸಬೇಕು. ಆರೋಗ್ಯ ಇಲಾಖೆಯಿಂದ ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಆರೊಗ್ಯ ತಪಾಸಣಾ ಕೇಂದ್ರಗಳನ್ನು ಅಳವಡಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯ ಆರೋಗ್ಯ ತಪಾಸಣೆ ಮಾಡಬೇಕು ಎಂದು ತಿಳಿಸಿದರು.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಲ್ಲಿ ಯಾರಿಗಾದರೂ ಆರೋಗ್ಯ ಸಮಸ್ಯೆ ಇದ್ದಲ್ಲಿ, ಅಂತಹ ವಿದ್ಯಾರ್ಥಿಯನ್ನು ಯಾವುದೇ ರೀತಿಯ ಕಳವಳಕ್ಕೆ ಆಸ್ಪದ ನೀಡದೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಬೇಕು ಎಂದು ಸಚಿವರು ಹೇಳಿದರು. 

ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಾರಿಗೆ ಸಮಸ್ಯೆ ಇರುವುದರಿಂದ ಜಿಲ್ಲಾಡಳಿತ ಜಿಲ್ಲೆಯ ಕಟ್ಟಕಡೆಯ ವಿದ್ಯಾರ್ಥಿಗೂ ಸಹ ಪರೀಕ್ಷೆ ಬರೆಯಲು ಎಲ್ಲಾ ರೀತಿಯ ಸೌಲಭ್ಯಗಳನ್ನು ಮಾಡಿಕೊಡಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕ ಬಸ್‍ಗಳನ್ನು ಪರೀಕ್ಷೆ ಸಮಯಕ್ಕೆ ಅನುಗುಣವಾಗುವಂತೆ ವ್ಯವಸ್ಥೆ ಮಾಡಬೇಕು, ಇಲ್ಲವಾದಲ್ಲಿ ಖಾಸಗಿ ಶಾಲೆಗಳ ಹೆಚ್ಚುವರಿ ಬಸ್‍ಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದರು.

ಹೈಕೋರ್ಟ್‍ನ ಆದೇಶದಂತೆ ಪ್ರತಿ ಜಿಲ್ಲೆಯಲ್ಲಿಯೂ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲು ಸಹಾಯವಾಣಿಯನ್ನು ಮಾಡಿ ಅದರ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡಬೇಕು. ಅಲ್ಲದೆ ಶಾಲೆಯ ಮುಖ್ಯ ಶಿಕ್ಷಕರು ತಮ್ಮ ವಿದ್ಯಾರ್ಥಿಗಳೊಡನೆ ದೂರವಾಣಿ ಮೂಲಕ ಪ್ರತಿನಿತ್ಯ ಸಂಪರ್ಕದಲ್ಲಿದ್ದು, ಸಾರಿಗೆ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವರದಿ ನೀಡಬೇಕು. ನಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸುರೇಶ್ ಕುಮಾರ್ ಅವರು ತಿಳಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಪೋಷಕರು ಹಾಗೂ ಇತರೆ ಸಂಬಂಧಿಕರು ಬರುವುದರಿಂದ ಹೆಚ್ಚು ಜನಸಂದಣಿಯಾಗುವ ಸಾದ್ಯತೆ ಇದೆ. ಹಾಗಾಗಿ ಎಲ್ಲಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು. ಪ್ರಶ್ನೆ ಪತ್ರಿಕೆಗಳನ್ನು ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ತೆಗೆದುಕೊಂಡು ಹೋಗುವಾಗ ಹಾಗೂ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು ಖಜಾನೆಗೆ ತರುವಾಗ ಬಿಗಿ ಬಂದೋಬಸ್ತ್ ನೀಡಬೇಕು ಎಂದರಲ್ಲದೆ, ಪ್ರಶ್ನೆಪತ್ರಿಕೆ ಸೋರಿಕೆ ಎಂದು ಸುಳ್ಳುಸುದ್ಧಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಾದ ಜಗದೀಶ್ ಅವರು ಮಾತನಾಡಿ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಪ್ರಾರಂಭವಾಗಿರುವುದರಿಂದ ಪರೀಕ್ಷಾ ಕೇಂದ್ರಗಳಲ್ಲಿ ನೀರು ಸೋರಿಕೆಯಾಗುವುದು, ವಿದ್ಯುತ್ ಸಮಸ್ಯೆ ಸೇರಿದಂತೆ ಕಟ್ಟಡಗಳ ನಿರ್ವಹಣೆಯನ್ನು ಅಗತ್ಯವಾಗಿ ಮಾಡಿಸಬೇಕು. ಇದಕ್ಕೆ ಅನುದಾನದ ಅವಶ್ಯಕತೆ ಇದ್ದಲ್ಲಿ ಸಂಚಿತ ನಿಧಿಯಿಂದ ಬಳಸಿಕೊಳ್ಳಬಹುದು ಎಂದರು. 

ವಿದ್ಯಾರ್ಥಿಗಳಿಗೆ ಪರೀಕ್ಷಾ ಸಂದರ್ಭದಲ್ಲಿ 2 ಮಾಸ್ಕ್‍ಗಳನ್ನು ವಿತರಿಸಲಾಗುತ್ತಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಹಾಗೂ ಸ್ಯಾನಿಟೈಸರ್ ಬಳಸುವಂತೆ ಕ್ರಮ ವಹಿಸಬೇಕು. ಈ ನಿಟ್ಟಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಇತರೆ ಸಂಸ್ಥೆಗಳ ಸ್ವಯಂ ಸೇವಕರು ಪಾಲ್ಗೊಂಡು ಸೇವೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

ಕಂಟೈನ್ಮೆಂಟ್ ವಲಯಗಳಿಂದ ಬರುವ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತ ತಮ್ಮದೇ ಜವಾಬ್ದಾರಿಯಿಂದ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಬೇಕು ಅಥವಾ ಕನಿಷ್ಠ ಆರು ಅಡಿಗಳ ಅಂತರ ಕಾಯ್ದುಕೊಳ್ಳುವಂತೆ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಅಂತಹ ವಿದ್ಯಾರ್ಥಿಗಳನ್ನು 1 ತಿಂಗಳ ನಂತರ ನಡೆಯುವ ಮರುಪರೀಕ್ಷೆಯಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಕಲ್ಪಿಸಲಾಗುವುದು, ಆದರೆ ಆ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಪ್ರಥಮ ಪ್ರಯತ್ನ ಎಂದೇ ಪರಿಗಣಿಸಲಾಗುವುದು ಎಂದು ಜಗದೀಶ್ ಹೇಳಿದರು.

ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಆಹಾರ ಹಾಗೂ ನೀರನ್ನು ಮನೆಯಿಂದಲೇ ಕೊಟ್ಟು ಕಳುಹಿಸಬೇಕು ಎಂದು ಪೋಷಕರಿಗೆ ಸೂಚನೆ ನೀಡಲಾಗುವುದು. ಒಟ್ಟಾರೆಯಾಗಿ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಅವರ ಆತ್ಮಸ್ಥೈರ್ಯವನ್ನು ಹೆಚ್ಚಿಸುವುದು ಜಿಲ್ಲಾಡಳಿತಗಳ ಪ್ರಮುಖ ಕಾರ್ಯ ಎಂದರು.

ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಹೆಚ್. ಮಂಜುನಾಥ್ ಹಾಗೂ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ರಾಜಕೀಯ

ಅಶ್ಲೀಲ ಪದ ಬಳಕೆ: ಸಿಟಿ ರವಿ ರಾಜ್ಯದ ಮಹಿಳೆಯರಿಗೆ ಕ್ಷಮೆಯಾಚಿಸಲಿ – ಶಾಸಕ ಶರತ್ ಬಚ್ಚೇಗೌಡ ಒತ್ತಾಯ| sharath bachegowda

ಅಶ್ಲೀಲ ಪದ ಬಳಕೆ: ಸಿಟಿ ರವಿ ರಾಜ್ಯದ ಮಹಿಳೆಯರಿಗೆ ಕ್ಷಮೆಯಾಚಿಸಲಿ – ಶಾಸಕ

ಭಾರತ್ ಮಾತಾ ಕಿ ಜೈ, ಭೇಟಿ ಬಚವೋ ಬೇಟಿ ಪಡಾವೋ ಎಂಬಂತೆ ಹೆಣ್ಣಿನ ಬಗ್ಗೆ ಮಾತನಾಡುವ ಇವರ ಪಕ್ಷದಲ್ಲಿ ಹೆಣ್ಣಿನ ಬಗ್ಗೆ ಕೀಳುಮಟ್ಟದ ರಾಜಕೀಯ ಮಾಡುವ sharath bachegowda

[ccc_my_favorite_select_button post_id="99273"]
ವೀಕೆಂಡ್ ಎಫೆಕ್ಟ್: ಘಾಟಿ ಸುಬ್ರಹ್ಮಣ್ಯ ರಸ್ತೆ ಟ್ರಾಫಿಕ್ ಜಾಮ್..!|Video ನೋಡಿ Ghati subramanya temple

ವೀಕೆಂಡ್ ಎಫೆಕ್ಟ್: ಘಾಟಿ ಸುಬ್ರಹ್ಮಣ್ಯ ರಸ್ತೆ ಟ್ರಾಫಿಕ್ ಜಾಮ್..!|Video ನೋಡಿ Ghati subramanya

ವಾಹನ ದಟ್ಟಣೆ ಹೆಚ್ಚಾದ ಕಾರಣ ವಾಹನ ಸವಾರರು, ಸುಮಾರು ಮೂರಕ್ಕು ಹೆಚ್ಚು ಗಂಟೆಗಳಿಂದ ಪರದಾಡುವಂತಾಗಿದೆ. Ghati subramanya temple

[ccc_my_favorite_select_button post_id="99261"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ಮರ ಕತ್ತರಿಸುವ ಯಂತ್ರದಿಂದ ಭೀಕರ ಕೊಲೆ..!| Murder

ಮರ ಕತ್ತರಿಸುವ ಯಂತ್ರದಿಂದ ಭೀಕರ ಕೊಲೆ..!| Murder

ಒಂಟಿ ಮನೆಗೆ ಬಂದ ದುಷ್ಕರ್ಮಿ ಯಂತ್ರವನ್ನು ಆನ್‌ಲೈನ್‌ನಲ್ಲಿ ಆರ್ಡ‌ರ್ ಮಾಡಿದ್ದೀರಾ ಎಂದು ತಿಳಿಸಿದ್ದಾನೆ. murder

[ccc_my_favorite_select_button post_id="99276"]
ನೆಲಮಂಗಲ Accident News update: ಮಹಾರಾಷ್ಟ್ರದ ಸ್ವಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ..!

ನೆಲಮಂಗಲ Accident News update: ಮಹಾರಾಷ್ಟ್ರದ ಸ್ವಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ..!

ಮೃತ ದೇಹಗಳನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಗ್ರಾಮಕ್ಕೆ ಮೂರು ಅಂಬುಲೆನ್ಸ್‌ ಮೂಲಕ ತಲುಪಿಸಲಾಯಿತು‌. Accident

[ccc_my_favorite_select_button post_id="99247"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]