ದೊಡ್ಡಬಳ್ಳಾಪುರ: ತಾಲ್ಲೂಕಿನ ಇತಿಹಾಸ ಪ್ರಸಿದ್ದ ಕನಸವಾಡಿ ಶನಿಮಹಾತ್ಮ ದೇವಾಲಯದಲ್ಲಿ ಬೆಳಿಗ್ಗೆ 8 ಗಂಟೆಯಿಂದ ಭಕ್ತಾದಿಗಳಿಂದ ದೇವರ ದರ್ಶನಕ್ಕೆ ಆರಂಭವಾಗಿದೆ.
ಮಾರ್ಚ್ 21 ರಂದು ಸಾರ್ವಜನಿಕರ ಪ್ರವೇಶಕ್ಕೆ ದೇವಾಲಯ ಬಂದ್ ಮಾಡಿದ ನಂತರ ಸೋಮವಾರ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಶನಿಮಹಾತ್ಮ ದೇವಾಲಯದಲ್ಲಿ ಬೆಳಿಗ್ಗೆ 8 ಗಂಟೆಯಿಂದಲೆ ದೇವರ ದರ್ಶನಕ್ಕೆ ಭಕ್ತಾದಿಗಳು ಸಾಲುಗಟ್ಟಿ ನಿಂತು ಪೂಜೆ ಸಲ್ಲಿಸಿದರು. ಬೆಂಗಳೂರು, ನೆಲಮಂಗಲ ಭಾಗಗಳಿಂದಲು ಭಕ್ತಾದಿಗಳು ಆಗಮಿಸಿದ್ದರು. ಸರ್ಕಾರದ ನಿಯಮಗಳನ್ನು ಪಾಲಿಸುವಂತೆ, ಅಂತರ ಕಾಪಾಡುವಂತೆ ತಿಳಿಸಲಾಗುತಿತ್ತು. ದೇವಾಲಯದ ಅನ್ನದಾಸೋಹ ಭವನದಲ್ಲಿ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು.
ನಗರದ ತೇರಿನ ಬೀದಿಯಲ್ಲಿನ ಪ್ರಸನ್ನ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯ, ತೂಬಗೆರೆಯ ಲಕ್ಷ್ಮೀವೆಂಕಟೇಶ್ವರ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳ ಬಾಗಿಲು ತೆರೆದಿದ್ದು ಪೂಜೆಗಳು ಆರಂಭವಾಗಿವೆ.