ದೊಡ್ಡಬಳ್ಳಾಪುರ : ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಕಾನೂನು ಬಾಹಿರವಾಗಿ ಬೋಧನಾ ಶುಲ್ಕವನ್ನು ಹೆಚ್ಚಿಸಿ, ವಿದ್ಯಾರ್ಥಿಗಳಿಂದ ವಸೂಲು ಮಾಡುತ್ತಿರುವ ದೂರುಗಳು ಬರುತ್ತಿದ್ದು ಅವುಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗ ಬಿ.ಎಸ್.ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಎಸ್ .ಸುರೇಶ್ ಕುಮಾರ್ ಅವರು ತಕ್ಷಣ ಗಮನ ಹರಿಸಿ ಶಿಕ್ಷಣ ಸಂಸ್ಥೆಗಳ ಲೂಟಿಯನ್ನು ನಿಲ್ಲಿಸಿ, ಅವುಗಳ ಮೇಲೆ ಕ್ರಮಕೈಗೊಳ್ಳಬೇಕು ಎಂದಿರುವ ಅವರು.
ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್ ಲೈನ್ ಶಿಕ್ಷಣವನ್ನು ಕೂಡಾ ದುಡ್ಡುಮಾಡುವ ಹೊಸ ದಂಧೆಯಾಗಿ ಮಾಡಿಕೊಂಡಿದ್ದಾರೆ. ಪ್ರಾಥಮಿಕ ಹಂತದಲ್ಲಿಯೇ ಶುರುವಾಗಿರುವ ಹಾವಳಿಯನ್ನು ಈ ಹಂತದಲ್ಲಿಯೇ ನಿಯಂತ್ರಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ಆದ್ಯತೆ ನೀಡಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.