ಬೆಂಗಳೂರು : ಎಲ್ಕೆಜಿ, ಯುಕೆಜಿ ಸೇರಿದಂತೆ 1ರಿಂದ 5ನೇ ತರಗತಿವರೆಗೂ ಆನ್ಲೈನ್ ಕ್ಲಾಸ್ ರದ್ದುಗೊಳಿಸಿ ಸರ್ಕಾರ ಆದೇಶ ನೀಡಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಅವರು ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಸಮಗ್ರ ಶಿಕ್ಷಣ ಕಚೇರಿಯಲ್ಲಿ ಇಲಾಖೆಯ ಅಧಿಕಾರಿಗಳು, ತಜ್ಞರು, ಖಾಸಗಿ ಶಾಲೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಆನ್ಲೈನ್ ಕ್ಲಾಸ್ ರದ್ದು ಕುರಿತು ತಿಳಿಸಿದ್ದಾರೆ.
ಇದೇ ವೇಳೆ ಶುಲ್ಕ ಹೆಚ್ಚಳ ಮಾಡಬಾರದೆಂದು ತಿಳಿಸಿದ್ದಾರೆ.
ಸಭೆಯಲ್ಲಿ ಸಚಿವ ಸುರೇಶ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಜಗದೀಶ್, ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಸಮಗ್ರ ಶಿಕ್ಷಣ ಇಲಾಖೆ ನಿರ್ದೇಶಕ ರಿಜು, ಶಿಕ್ಷಣ ತಜ್ಞರು, ಚಿಂತಕ ಗುರುರಾಜ ಕರ್ಜಗಿ, ಶಿಕ್ಷಣ ತಜ್ಞರು ನಿರಂಜನ ಆರಾಧ್ಯ, ನಿಮ್ಹಾನ್ಸ್ ತಜ್ಞ ವೈದ್ಯರು ಹಾಗೂ ಖಾಸಗಿ ಶಾಲೆಗಳ ಸಂಘಟನೆ ಒಕ್ಕೂಟ (ಕ್ಯಾಮ್ಸ್) ಸಂಘಟನೆಯ ಕಾರ್ಯದರ್ಶಿ ಶಶಿಕುಮಾರ್ ಭಾಗವಹಿಸಿದ್ದರು.