ಬೆಂಗಳೂರು : ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೂತನ ಕಚೇರಿ, ಲಾಂಛನ ಹಾಗೂ ಜಾಲತಾಣಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.
ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಮುಜರಾಯಿ ಹಾಗೂ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಂದಾಯ ಸಚಿವ ಆರ್.ಅಶೋಕ್, ಶಾಸಕ ಎಸ್.ಆರ್.ವಿಶ್ವನಾಥ್, ಸಂಸದ ತೇಜಸ್ವಿ ಸೂರ್ಯ,ಮಾಜಿ ಸಚಿವರುಗಳಾದ ಆರ್.ವಿ.ದೇಶಪಾಂಡೆ ಹಾಗೂ ರಾಮ್ ದಾಸ್ ಮತ್ತಿತರರು ಉಪಸ್ಥಿತರಿದ್ದರು.