ನವದೆಹಲಿ: ಚೀನಾ ಜೊತೆಗಿನ ಸಂಘರ್ಷದ ಹಿನ್ನೆಲೆಯಲ್ಲಿ ಜೂನ್ 19 ರಂದು ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷ ಸಭೆಯನ್ನು ಕರೆದಿದ್ದಾರೆ.
ಜೂನ್ 19ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ರಾಜಕೀಯ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.
ಗಡಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಪ್ರತಿ ಪಕ್ಷಗಳು ಪ್ರಶ್ನೆಗಳನ್ನು ಕೇಳುತ್ತಿರುವ ಹಿನ್ನೆಲೆಯಲ್ಲಿ ಮೋದಿ ಸಭೆ ಕರೆದಿದ್ದಾರೆ.
ಜೂ.21ಕ್ಕೆ ದೇಶವನ್ನು ಉದ್ದೇಶಿಸಿ ಮೋದಿ ಭಾಷಣ
ಜೂನ್ 21 ಭಾನುವಾರ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದು,ಚೀನಾ ಜೊತೆ ಸಂಘರ್ಷ ಜೊತೆ ಕೋವಿಡ್ 19 ಸೋಂಕಿತರ ಸಂಖ್ಯೆ ದೇಶದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಭಾಷಣ ಈಗ ಮಹತ್ವ ಪಡೆದಿದೆ.