Site icon Harithalekhani

ಬೆಳೆ ಸಾಲ ಪಡೆಯಲು ಕೃಷಿ ವಿಮಾ ಯೋಜನೆಯಡಿ ರೈತರು ಒಳಪಡುವುದು ಅವಶ್ಯವಲ್ಲ

ದೊಡ್ಡಬಳ್ಳಾಪುರ: ಕೃಷಿ ಇಲಾಖೆ ವತಿಯಿಂದ 2020-21ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯಡಿ ಮುಂಗಾರು ಹಂಗಾಮಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು, ಅಧಿಸೂಚಿತ ಬೆಳೆಗಳಿಗೆ ಬೆಳೆ ಸಾಲ ಪಡೆಯುವ ಸಮಯದಲ್ಲಿ, ಕೃಷಿ ವಿಮಾ ಯೋಜನೆಯಡಿ ಕಡ್ಡಾಯವಾಗಿ ಒಳಪಡುವ ಅವಶ್ಯಕತೆ ಇರುವುದಿಲ್ಲ. 

ಬದಲಾಗಿ ಇಚ್ಛೆ ಪಡೆಯದೇ ಇದ್ದಲ್ಲಿ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೊಂದಣಿಯಾಗುವ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈ ಬಿಡಲಾಗುವುದು.

ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ, ರೈತರಿಂದ ಸ್ವೀಕರಿಸಲಾಗುವ ಮುಚ್ಚಳಿಕೆ ಪತ್ರಗಳನ್ನು ಇತರೆ ದಾಖಲೆಗಳೊಂದಿಗೆ ವ್ಯವಸ್ಥಿತವಾಗಿ ನಿರ್ವಹಿಸಲು ಹಾಗೂ ಸಹಕಾರವನ್ನು ನೀಡುವಂತೆ ತಮ್ಮ ಅಧೀನದಲ್ಲಿ ಬರುವ ಸಂಬಂಧಿತ ಬ್ಯಾಂಕ್‍ಗಳಿಗೆ ಸೂಕ್ತ ಆದೇಶ ನೀಡಬೇಕೆಂದು ಜಂಟಿ ಕೃಷಿ ನಿರ್ದೇಶಕ ಜಯಸ್ವಾಮಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Exit mobile version