ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂವರು ವ್ಯಕ್ತಿಯಲ್ಲಿ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಹೊಸಕೋಟೆಯ ಕುವೆಂಪು ನಗರದ ನಿವಾಸಿ 32 ವರ್ಷದ ಮಹಿಳೆ(ಪಿ-10823) ಹಾಗೂ ದೇವನಹಳ್ಳಿಯ ಶಾಂತಿನಗರ ವಾರ್ಡ್ನ ನಿವಾಸಿ 33 ವರ್ಷದ ಪುರುಷ(ಪಿ-10825) ಇನ್ಫ್ಲೂಯೆನ್ಜಾ ಲೈಕ್ ಇಲ್ನೆಸ್(ಐಎಲ್ಐ) ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಆರೋಗ್ಯ ತಪಾಸಣೆ ಮಾಡಿಸಿದಾಗ ಕೊರೋನಾ ವೈರಾಣು ಸೋಂಕು ದೃಢಪಟ್ಟಿರುತ್ತದೆ.
ದೇವನಹಳ್ಳಿಯ ವಿಜಯಪುರ ಪಟ್ಟಣದ ಜೆ.ಸಿ.ವಾರ್ಡ್ನ ನಿವಾಸಿ 45 ವರ್ಷದ ಪುರುಷ(ಪಿ-10824) ಕೋವಿಡ್-19 ಸೋಂಕಿತ ವ್ಯಕ್ತಿಯ(ಪಿ-9229) ದ್ವಿತೀಯ ಸಂಪರ್ಕ ಹೊಂದಿದ್ದ ಹಿನ್ನೆಲೆ ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಕೊರೋನಾ ವೈರಾಣು ಸೋಂಕು ದೃಢಪಟ್ಟಿರುತ್ತದೆ.
ಸೋಂಕಿತ ವ್ಯಕ್ತಿಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.