ದೊಡ್ಡಬಳ್ಳಾಪುರದಲ್ಲಿ ಕರೊನಾ ವೈರಸ್‌ ಸೋಂಕು ತಡೆಗೆ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯ ಚೈತನ್ಯನಗರದಲ್ಲಿ ಇಬ್ಬರು ವ್ಯಕ್ತಿಗಳಿಗೆ ಕೋವಿಡ್‌-19 ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಶನಿವಾರ ಶಾಸಕ ಟಿ.ವೆಂಕಟರಮಣಯ್ಯ ಪ್ರವಾಸಿ ಮಂದಿರಲ್ಲಿ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.

ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಮಾತನಾಡಿ, ಜೂ.29 ರಂದು ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ಸಂಘ ಸಂಸ್ಥೆ ಹಾಗೂ ವರ್ತಕರ ಸಭೆ ನಡೆಸಿ ಕರೊನಾ ವೈರಸ್‌ ಸೋಂಕು ಹರಡದಂತೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಅಭಿಪ್ರಾಯ ಪಡೆಯಲಾಗುವುದು. ಎಲ್ಲರ ಸಲಹೆಗಳಂತೆ ನಗರದಲ್ಲಿ ಸೋಂಕು ಹರಡದಂತೆ ಕೈಗೊಳ್ಳಬೆಕಿರುವ ಕಟ್ಟುನಿಟ್ಟಿನ ನಿಯಮಗಳ ಬಗ್ಗೆ ನಿರ್ಧರಿಸಲಾಗುವುದು.ಈಗಾಗಲೇ ನೆರೆಯ ತಾಲ್ಲೂಕುಗಳಾದ ನೆಲಮಂಗಲ, ದೇವನಹಳ್ಳಿ ಹಾಗೂ ವಿಜಯಪುರದಲ್ಲಿ ಸೋಂಕು ಹರಡುವುದನ್ನು ತಡೆಯಲು ಅಲ್ಲಿನ ವರ್ತಕರು, ಸಾರ್ವಜನಿಕರು ಅನುಸರಿಸುತ್ತಿರುವ ಕ್ರಮಗಳನ್ನು ಇಲ್ಲಿಯು ಜಾರಿಗೆ ತರುವ ಕುರಿತಂತೆ ಸಭೆಯಲ್ಲಿಯೇ ನಿರ್ಧರಿಸಲಾಗುವುದು ಎಂದರು.

ಕರೊನಾ ವೈರಸ್‌ ಸೋಂಕು ನಗರದ ಇತರೆ ಪ್ರದೇಶಗಳಿಗೂ ಹರಡದಂತೆ ಔಷಧಿ ಸಿಂಪರಣೆ, ಮಾಸ್ಕ್‌ ಧರಿಸದೇ ಇರುವವರಿಗೆ ದಂಡ ವಿಧಿಸುವುದು, ಹೋಟೆಲ್‌, ಮಾರುಕಟ್ಟೆ ಮತ್ತಿತರೆ ಕಡೆಗಳಲ್ಲಿ ಹೆಚ್ಚು ಜನಸಂದಣಿ ಸೇರಿದಂತೆ ನಗರಸಭೆ ವತಿಯಿಂದ ಹಾಗೂ ತಾಲ್ಲೂಕು ಆಡಳಿತದಿಂದ ಆಟೋದಲ್ಲಿ ಜಾಗೃತಿ ಮೂಡಿಸುವಂತೆ ಸೂಚಿಸಿದರು.

ಸಭೆಯಲ್ಲಿ ಹಾಜರಿದ್ದ ಡಿವೈಎಸ್‌ಪಿ ಟಿ.ರಂಗಪ್ಪ ಮಾಹಿತಿ ನೀಡಿ, ವಿಜಯಪುರದಲ್ಲಿ ಐದು ಜನರಿಗೆ ಕೋವಿಡ್‌-19 ಸೋಂಕು ಧೃಡಪಟ್ಟಿದೆ. ಅಲ್ಲಿನ ಜನ ಹಾಗೂ ವ್ಯಾಪಾರಿಗಳೆ ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ತೆರೆಯುವ ಸಮಯವನ್ನು ನಿಗದಿಪಡಿಸಿಕೊಂಡಿದ್ದಾರೆ. ಇದರಿಂದ ಇಡೀ ದಿನ ಜನರು ನಗರ ಪ್ರದೇಶದಲ್ಲಿ ಅನಾವಶ್ಯಕವಾಗಿ ತಿರುಗಾಡುವುದು ತಪ್ಪಲಿದೆ. ಸಂತೆ, ಉತ್ಸವ ಸೇರಿದಂತೆ ಎಲ್ಲವನ್ನು ರದ್ದುಪಡಿಸಿದ್ದಾರೆ. ಇದೇ ಮಾದರಿಯನ್ನು ಇಲ್ಲಿಯು ಜನರೇ ನಿರ್ಧರಿಸಿಕೊಂಡರೆ ಸೋಂಕು ಹರಡುವುದನ್ನು ತಡೆಯುವುದು ಸುಲಭವಾಗಲಿದೆ ಎಂದು ಸಲಹೆ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್‌, ನಗರಸಭೆ ಪೌರಾಯುಕ್ತ ರಮೇಶ್‌ ಎಸ್‌.ಸುಣಗಾರ್‌, ನಗರಸಭೆ ಕಾರ್ಯನಿರ್ವಾಹಕ ಎಂಜಿನಿಯರ್‌ ಶೇಕ್‌ಫೀರೋಜ್‌, ಎಂಜಿನಿಯರ್‌ಗಳಾದ ರಾಮೇಗೌಡ, ಚಂದ್ರಶೇಖರ್‌, ಈರಣ್ಣ, ನಗರ ಪೊಲೀಸ್‌ ಠಾಣೆ ಸಬ್‌ಇನ್‌ಸ್ಪೆಕ್ಟರ್‌ ಸೋಮಶೇಖರ್‌ ಇದ್ದರು.     

ರಾಜಕೀಯ

Doddaballapura: ನ್ಯಾಯಾಲಯದ ಆವರಣದಲ್ಲಿ ಸಂಭ್ರಮದ ರಾಜ್ಯೋತ್ಸವ – ವಕೀಲರ ದಿನಾಚರಣೆ.!

Doddaballapura: ನ್ಯಾಯಾಲಯದ ಆವರಣದಲ್ಲಿ ಸಂಭ್ರಮದ ರಾಜ್ಯೋತ್ಸವ – ವಕೀಲರ ದಿನಾಚರಣೆ.!

ಅನ್ಯ ಭಾಷೆಯಿಂದ ನಮ್ಮ ಭಾಷೆಗೆ ಅನುವಾದ ಮಾಡುವಾಗ ನಮ್ಮ ಭಾಷೆ ಮೇಲಿನ ಹಿಡಿತ ಸಾಧಿಸಿರುವುದು ಮುಖ್ಯವಾಗುತ್ತದೆ. Doddaballapura

[ccc_my_favorite_select_button post_id="99213"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ ಎಂದು ಅಭಿಮಾನಿಗಳ ಆಕ್ರೋಶ| Darshan

ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ

ಕೆಲ ಖಾಸಗಿ ಸುದ್ದಿವಾಹಿನಿಗಳ ಬಗ್ಗೆ ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗಡೆ, ಗೃಹಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ Darshan

[ccc_my_favorite_select_button post_id="99206"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]