ದೊಡ್ಡಬಳ್ಳಾಪುರ : ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಎಸ್.ಸುರೇಶ್‌ಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದು, ಇಂದು ಮಧ್ಯಾಹ್ನ 12.30 ಗಂಟೆಗೆ ನೆಲಮಂಗಲ ತಾಲ್ಲೂಕಿನ ಕೆಲವು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ.
ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಸರ್ಕಾರಿ ಪದವಿ ಪೂರ್ವ ಕಾಲೇಜು, ನೆಲಮಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಆಂಗ್ಲ ಪ್ರೌಢಶಾಲೆ ಹಾಗೂ ಮಂಜುನಾಥ ಬಾಲಕಿಯರ ಪ್ರೌಢಶಾಲೆಗೆ ಸಚಿವರು ಭೇಟಿ ನೀಡಿ ಪರಿಶೀಲಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ತುಮಕೂರಿನ ತುಮಕೂರಿನ ಸರಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.