Site icon Harithalekhani

ಜಿಲ್ಲಾಧಿಕಾರಿಗೆ ಕರೊನಾ ಪಾಸಿಟಿವ್ / 48 ಗಂಟೆಗಳ ಕಾಲ ಜಿಲ್ಲಾಡಳಿತ ಭವನ ಸೀಲ್ ಡೌನ್

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ  ಜಿಲ್ಲಾಧಿಕಾರಿಗೆ ಕರೊನಾ ಪಾಸಿಟಿವ್ ಬಂದ ಹಿನ್ನೆಲೆ 48 ಗಂಟೆಗಳ ಕಾಲ ಜಿಲ್ಲಾಡಳಿತ ಭವನದಲ್ಲಿನ ಎಲ್ಲಾ ಕಚೇರಿಗಳನ್ನ ಸೀಲ್ ಡೌನ್ ಮಾಡಲಾಗಿದೆ. 

ಬೀರಸಂದ್ರ ಗ್ರಾಮದಲ್ಲಿನ ಜಿಲ್ಲಾಡಳಿತ ಭವನ ಜುಲೈ 2 ರಿಂದ 48 ಗಂಟೆಗಳ ಕಾಲ ಸೀಲ್ ಡೌನ್ ಮಾಡಿರುವ ಬಗ್ಗೆ ಅಪರ ಜಿಲ್ಲಾಧಿಕಾರಿ ಜಗದೀಶ್ ನಾಯಕ್ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಡಳಿತ ಭವನದಲ್ಲಿ ಕಾರ್ಯ  ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಕಚೇರಿಗಳ ಒಳಾಂಗಣ ಮತ್ತು ಹೊರಾಂಗಣ ಸ್ಯಾನಿಟೈಸ್ ಮಾಡಲಾಗುತ್ತದೆ.

ಅಧಿಕಾರಿಗಳು ಮತ್ತು ಸಿಬ್ಬಂದಿ  ಕಚೇರಿಗೆ ಬಾರದಂತೆ  ಆದೇಶ ನೀಡಲಾಗಿದ್ದು, ತುರ್ತು  ಸಮಯದಲ್ಲಿ  ಮನೆಯಿಂದ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 

Exit mobile version