ಲಡಾಕ್ : ಚೀನಾ ಸಂಘರ್ಷದ ನಂತರ ಪ್ರಧಾನಿ ಮೋದಿ ಲಡಾಕ್‍ಗೆ ದಿಢೀರ್ ಭೇಟಿ ನೀಡಿ ಸೈನಿಕರೊಂದಿಗೆ ಮಾತುಕತೆ ನಡೆಸಿದ್ದಾರೆ.
ಗಲ್ವಾನ್ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲಡಾಕ್‍ನ ಲೇಹ್‍ಗೆ ಭೇಟಿ ಕೊಟ್ಟಿದ್ದಾರೆ.
ಪ್ರಧಾನ ಮಂತ್ರಿ ಗಾಯಗೊಂಡ ಸೈನಿಕರನ್ನು ಮಿಲಿಟರಿ ಆಸ್ಪತ್ರೆಯಲ್ಲಿ ಭೇಟಿಯಾಗಲಿದ್ದು, ಅವರಿಗೆ ಮನೋಸ್ಥೈರ್ಯ ತುಂಬಲಿದ್ದಾರೆ.ಈ ವೇಳೆ ರಕ್ಷಣಾ ಮುಖ್ಯಸ್ಥ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರವಾನೆ ಮತ್ತಿತರಿದ್ದಾರೆಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.