ದೊಡ್ಡಬಳ್ಳಾಪುರ: ತಾಲೂಕಿನ ಮೆಳೇಕೋಟೆ ಗ್ರಾಮ ಪಂಚಾಯಿತಿ ಆವರಣದಲ್ಲಿ ತೋಟಗಾರಿಕಾ ಇಲಾಖೆ,ತಾಲೂಕು ಪಂಚಾಯಿತಿ ಸಹಯೋಗದೊಂದಿಗೆ ಮನೆಯಂಗಳದಲ್ಲಿ ಕೈತೋಟ(kitchen garden) ಎಂಬ ಕಾರ್ಯಕ್ರಮಕ್ಕೆ ತಾಪಂ ಸಹಾಯಕ ನಿರ್ದೇಶಕಿ ಸಿ.ಗೀತಾಮಣಿ ಚಾಲನೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಫಲಾನುಭವಿಗಳಿಗೆ ಸುಮಾರು 2500 ವಿವಿಧ ಬಗೆಯ ಕೈತೋಟದ ಗಿಡಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ಹಿರಿಯ ನಿರ್ದೇಶಕರು ಮಹೇಶ್,ವಲಯ ಅರಣ್ಯ ಅಧಿಕಾರಿ ಶ್ರೀಧರ್,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಮಿತಾ ಮತ್ತಿತರಿದ್ದರು.