ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಜುಲೈ 21 ರಂದು) 95 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.
ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 19, ಹೊಸಕೋಟೆ ತಾಲ್ಲೂಕಿನಲ್ಲಿ 32, ದೇವನಹಳ್ಳಿ ತಾಲ್ಲೂಕಿನಲ್ಲಿ 17 ಹಾಗೂ ಬೆಂಗಳೂರು ನಗರ ಜಿಲ್ಲೆಯ 4 ಪ್ರಕರಣಗಳು ವರದಿಯಾಗಿದೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನ ವರದಿಯ ಗೊಂದಲ ಮುಂದುವರೆದಿರುವ ಕಾರಣ ಹರಿತಲೇಖನಿ ಅಂಕಿಅಂಶಗಳ ವಿವರ ಪಕಟಿಸುತ್ತಿಲ್ಲ.