ದೊಡ್ಡಬಳ್ಳಾಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿಯೊಂದಿಗೆ ಶಿಷ್ಯವೇತನ ನೀಡುವ ಸಲುವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ಮತ್ತು ನೆಲಮಂಗಲ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಡುವ ಅರ್ಹ ಅಭ್ಯರ್ಥಿಗಳು ಮಾತ್ರ ಸಮಾಜ ಕಲ್ಯಾಣ ಇಲಾಖೆ ವೆಬ್‌ಸೈಟ್: www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2020ರ ನವೆಂಬರ್ 11 ಕೊನೆಯ ದಿನವಾಗಿದೆ.
ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಎರಡು ವರ್ಷದ ಒಳಗೆ ಕಾನೂನು ಪದವಿಯನ್ನು ಪಡೆದಿರಬೇಕು. ಕಾನೂನು ಪದವೀಧರರ ಕುಟುಂಬದ ವಾರ್ಷಿಕ ಆದಾಯ ರೂ. 2 ಲಕ್ಷ ಮೀರಿರಬಾರದು.
ತರಬೇತಿ ಅವಧಿ 2 ವರ್ಷಗಳಾಗಿದ್ದು, ಮಾಸಿಕ ರೂ.10,000/-ಗಳ ಶಿಷ್ಯ ವೇತನ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಹಿರಿಯ ವಕೀಲರಲ್ಲಿ ತರಬೇತಿ ನಿಯೋಜಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಮಧ್ಯಂತರದಲ್ಲಿ ಬಿಟ್ಟು ಹೋಗಬಾರದು ಹಾಗೆ ಬಿಟ್ಟು ಹೊದ ಪಕ್ಷದಲ್ಲಿ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ವಾಪಸ್ಸು ಪಡೆಯಲಾಗುವುದು ಹಾಗೂ ಈ ನಿಯಮ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ದಿಮೆಯಲ್ಲಿ ನೇಮಕ ಹೊಂದುವವರಿಗೆ ಅನ್ವಯಿಸುವುದಿಲ್ಲ. ಸುಳ್ಳು ದಾಖಲೆ ಮಾಹಿತಿಯನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಅನ್ವಯ ಶಿಕ್ಷೆಗೆ ಗುರಿ ಪಡಿಸಲಾಗುವುದು ಹಾಗೂ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ಶೇ.10 ರಂತೆ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು.
ಅರ್ಜಿಯಲ್ಲಿನ ಮಾಹಿತಿಯು ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು-562110, ದೂ.ಸಂ.: 080-29787447 ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ ದೂ.ಸಂ.: 27681784, ದೊಡ್ಡಬಳ್ಳಾಪುರ ದೂ.ಸಂ.: 27623681, ಹೊಸಕೋಟೆ ದೂ.ಸಂ.: 27931528 ಮತ್ತು ನೆಲಮಂಗಲ ದೂ.ಸಂ.: 27723172, ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.