ಕಲಬುರಗಿ: ಬ್ಯಾಂಕ್‍ಗಳ ಮೂಲಕ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ಯೋಜನೆಗಳನ್ನು ಶೇಕಡ 100 ರಷ್ಟು ಗುರಿ ಸಾಧಿಸಲು ಶ್ರಮಿಸಬೇಕೆಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಬ್ಯಾಂಕರ್‍ಗಳಿಗೆ ಸೂಚಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ಬ್ಯಾಂಕರ್‍ಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡುತ್ತಿದ್ದರು.
ಸೂಕ್ಷ್ಮ, ಸಣ್ಣ ಹಾಗೂ ಮಾಧ್ಯಮ ಕೈಗಾರಿಕೆಗಳ ಸಂಬಂಧಿಸಿದ ಸಾಲ ಸೇರಿದಂತೆ ಇನ್ನಿತರ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ನಿಗದಿತ ಗುರಿ ಸಾಧಿಸಬೇಕು ಎಂದು ಒತ್ತಿ ಹೇಳಿದರು.
ಬ್ಯಾಂಕಿಗೆ ಬರುವ ಗ್ರಾಹಕರ ಜೊತೆ ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ಹಾಗೆಯೇ ಸಾಲ ಮತ್ತಿತರವುಗಳಿಗೆ ಅರ್ಜಿ ಸಲ್ಲಿಸಿದವರನ್ನು ವಿನಾಕಾರಣ ಅಲೆದಾಡಿಸಬಾರು. ಅರ್ಜಿದಾರರು ಸಾಲಕ್ಕಾಗಿ ಅರ್ಜಿ ಸಲ್ಲಿಸಿದ 15 ದಿನದೊಳಗಾಗಿ ಸಾಲ ನೀಡಬೇಕು ಎಂದ ಅವರು, ಮುದ್ರಾ ಯೋಜನೆ ಕುರಿತು ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಿ ಗರಿಷ್ಠ ಮಟ್ಟದಲ್ಲಿ ಸಾಲ ವಿತರಿಸಬೇಕು ಎಂದರು.
ಬ್ಯಾಂಕ್‍ಗಳು ಶೈಕ್ಷಣಿಕ ಸಾಲಕ್ಕೆ ಮೊದಲು ಆದ್ಯತೆ ನೀಡುವುದರ ಮೂಲಕ ಶಿಕ್ಷಣಕ್ಕೆ ಪೆÇ್ರೀತ್ಸಾಹ ನೀಡಬೇಕು ಎಂದು ಸಂಸದ ಡಾ.ಉಮೇಶ್ ಜಾಧವ ಹೇಳಿದರು.
ಬ್ಯಾಂಕಿನ ಯಾವುದಾದರೂ ಸ್ಕೀಂಗಳ ಮೂಲಕ ಪುನ: ಸುಸ್ತಿದಾರರ ನೆರವಿಗೆ ಬರಬೇಕು ಎಂದು ಅವರು ಸಲಹೆ ನೀಡಿದರು.
ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಸಂಬಂಧ ಯಾವುದೇ ಬ್ಯಾಂಕಿಗಾಗಲೀ ಅಥವಾ ಯಾವುದೇ ಇಲಾಖೆಗಾಗಲೀ ಸಮಸ್ಯೆ ಇದ್ದರೆ ತಿಳಿಸಿದಲ್ಲಿ ಪರಿಹರಿಸಲು ಪ್ರಯತ್ನಿಸುವುದಾಗಿ ಎಂದು ಅವರು ವಾಗ್ದಾನ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಡಾ.ಪಿ.ರಾಜಾ ಮಾತನಾಡಿ, ಸರ್ಕಾರದ ಯೋಜನೆಗಳ ಸಂಬಂಧ ಬರುವ ಅರ್ಜಿಗಳ ಇತ್ಯರ್ಥ ಕಾರಣ ಇಲ್ಲದೆ ವಿಳಂಬ ಮಾಡಬಾರದು. ಒಂದು ವೇಳೆ ಪೆಂಡಿಂಗ್ ಇಟ್ಟಲ್ಲಿ ಕಾರಣ ನೀಡಬೇಕು ಎಂದು ಅವರು ಹೇಳಿದರು.
ವೇದಿಕೆಯಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಇಂತಿಸಾರ್ ಹುಸೇನ್, ನಬಾರ್ಡ್ ಬ್ಯಾಂಕಿನ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕರಾದ ರಮೇಶ್ ಭಟ್ ಇದ್ದರು.