Site icon Harithalekhani

ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ

ಬೆಂಗಳೂರು: ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ಗುಪ್ತಚರ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕರಾಗಿದ್ದ ಕಮಲ್ ಪಂತ್ ಅವರನ್ನು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ವರ್ಗಾಯಿಸಲಾಗಿದೆ.

ಅಲ್ಲದೆ ಆರ್ಥಿಕ ಅಪರಾಧಗಳು ಮತ್ತು ಅಪರಾಧ ತನಿಖಾ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಬಿ.ದಯಾನಂದ ಅವರನ್ನು ಕಮಲ್ ಪಂತ್‌ ಅವರ ವರ್ಗಾವಣೆಯಿಂದ ತೆರವಾದ ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸ್ಥಾನಕ್ಕೆ ವರ್ಗಾಯಿಸಿ ಆದೇಶಿಸಲಾಗಿದೆ.

Exit mobile version