ದೊಡ್ಡಬಳ್ಳಾಪುರ: ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ತಾಲೂಕಿನಲ್ಲಿ ಮುಸ್ಲಿಂ ಬಾಂಧವರಿಂದ ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.
ಕೊವಿಡ್-19 ಮಾರ್ಗಸೂಚಿ ಹಿನ್ನಲೆಯಲ್ಲಿ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಅವಕಾಶವಿರಲಿಲ್ಲ. ಬಕ್ರೀದ್ ಅಂಗವಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ, ಧಾರ್ಮಿಕ ಸಂಪ್ರದಾಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಮುಸ್ಲಿಂ ಬಾಂಧವರು ಅಂತರ ಕಾಪಾಡಿಕೊಂಡು ಪ್ರಾರ್ಥನೆ ಸಲ್ಲಿಸಿದರು.
ಮುಸ್ಲಿಂ ಗುರುಗಳಿಂದ ದಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು. ಮುತ್ತೂರು ಪಾಲನಜೋಗಿಹಳ್ಳಿ ತೂಬಗೆರೆ, ದೊಡ್ಡಬೆಳವಂಗಲ, ಕನಸವಾಡಿ, ಬಾಶೆಟ್ಟಿಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲೂ, ಹೋಬಳಿ ಕೇಂದ್ರಗಳಲ್ಲಿರುವ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗಳು ನಡೆದವು. ನಗರ ಮತ್ತು ಗ್ರಾಮಾಂತರದೆಲ್ಲೆಡೆ ಬಕ್ರೀದ್ ಆಚರಣೆ ಮಾಡಲಾಯಿತು.
ಬಕ್ರೀದ್ ಆಚರಣೆಯಲ್ಲಿ ತಮ್ಮ ಶಕ್ತಾನುಸಾರ ಮುಸ್ಲಿಂ ಬಾಂಧವರು ದಾನ ಮಾಡಿ ಬಕ್ರೀದ್ ಆಚರಣೆ ಮಾಡಿದರು.