Site icon Harithalekhani

ಶುಭ ಸುದ್ದಿ: ದೊಡ್ಡಬಳ್ಳಾಪುರ ತಾಲ್ಲೂಕಿನ ಕರೊನಾ ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಹೆಚ್ಚು

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಸೋಮವಾರ ಮೂರು ಮಂದಿಗೆ ಕರೊನಾ ಸೊಂಕು ದೃಡಪಟ್ಟಿದ್ದು,95 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳುವ ಮೂಲಕ ಸಕ್ರಿಯ ಪ್ರಕರಣಗಳಿಗಿಂತ ಗುಣ ಮುಖರಾದವರ ಸಂಖ್ಯೆ ಹೆಚ್ಚಾಗಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ,ಸೋಮವಾರದ ಸಂಜೆಯ ವರಗೆ ಓರ್ವ ಪುರುಷ ಹಾಗೂ ಇಬ್ಬರು ಮಹಿಳೆಯರು ಸೇರಿ ಮೂರು ಜನರಿಗೆ ಸೋಂಕು ದೃಡಪಟ್ಟಿದೆ.

ಹರಿತಲೇಖನಿಗೆ ದೊರಕಿರುವ ವರದಿಯಂತೆ.ನಗರದ ಸಂಖ್ಯೆ 22 ಗಂಡು ಹಾಗೂ ಮಾಚಗೊಂಡನಹಳ್ಳಿಯ ಇಬ್ಬರಿಗೆ ಕರೊನಾ ಸೋಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 652 ಮಂದಿಗೆ ಸೋಂಕು ತಗುಲಿದ್ದು,376 ಮಂದಿ ಗುಣಮುಖರಾಗಿದ್ದರೆ 17 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 37 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 222 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

Exit mobile version