ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು 70 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ಜಿಲ್ಲಾ ಬುಲೆಟಿನ್ ಅನ್ವಯ ನೆಲಮಂಗಲ ತಾಲ್ಲೂಕಿನಲ್ಲಿ 18, ಹೊಸಕೋಟೆ ತಾಲ್ಲೂಕಿನಲ್ಲಿ 22, ದೇವನಹಳ್ಳಿ ತಾಲ್ಲೂಕಿನಲ್ಲಿ 16 ಹಾಗೂ ಬೆಂಗಳೂರು ನಗರ ಜಿಲ್ಲೆಗೆ ಸೇರಿದ 4 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಉಳಿದಂತೆ ಜಿಲ್ಲಾಡಳಿತ ನೀಡಿರುವ ವರದಿಗೂ, ದೊಡ್ಡಬಳ್ಳಾಪುರ ತಾಲೂಕು ಆಡಳಿತದ ವರದಿಗೂ ವೆತ್ಯಾಸ ಮುಂದುವರೆದಿದ್ದು ಹರಿತಲೇಖನಿ ಜಿಲ್ಲಾಡಳಿತದ ವರದಿ ಪ್ರಕಟಿಸುತ್ತಿಲ್ಲ.