ದೊಡ್ಡಬಳ್ಳಾಪುರ: ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಪರಿಶಿಷ್ಟ ಜಾತಿಗೆ ಸೇರಿದ ಅಲೆಮಾರಿ/ ಅರೆ ಅಲೆಮಾರಿ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ 2020-21ನೇ ಸಾಲಿಗೆ ಸಂಬಂಧಿಸಿದಂತೆ ಸ್ವಯಂ ಉದ್ಯೋಗ ಕೈಗೊಳ್ಳಲು ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಹಾಗೂ ಮೈಕ್ರೋ ಕ್ರೆಡಿಟ್(ಪ್ರೇರಣಾ) (ಮಹಿಳಾ ಸ್ವ ಸಹಾಯ ಗುಂಪುಗಳಿಗೆ) ಯೋಜನೆಗಳಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸೌಲಭ್ಯ ಪಡೆಯಲು ಇಚ್ಛಿಸುವವರು, ನಿಗಮದ ಈ ಕೆಳಗಿನ ವೆಬ್‍ಸೈಟ್‌ನಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ನಿಗಮದ ಕಛೇರಿಗೆ ಈ ಕೆಳಕಂಡ ದಾಖಲಾತಿಗಳೊಂದಿಗೆ ಸಲ್ಲಿಸಬಹುದು.
ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು, ಪರಿಶಿಷ್ಟ ಜಾತಿ ಪ್ರಮಾಣ ಪತ್ರ(ಆರ್.ಡಿ.ನಂಬರ್ ಕಡ್ಡಾಯ), ಕುಟುಂಬದ ವಾರ್ಷಿಕ ಆದಾಯ ಪತ್ರ(ಆರ್.ಡಿ.ನಂಬರ್ ಕಡ್ಡಾಯ), ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ/ಸಫಾಯಿ ಕರ್ಮಚಾರಿ ಗುರುತಿನ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಪ್ರತಿ ಮತ್ತು ಮೊಬೈಲ್ ಸಂಖ್ಯೆ, ವಾಹನ ಪರವಾನಗಿ/ಬ್ಯಾಡ್ಜ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.ಅರ್ಜಿದಾರರು ವಯೋಮಿತಿ 18 ರಿಂದ 50 ವರ್ಷ ದೊಳಗಿನವರಾಗಿರಬೇಕು.ಆಸಕ್ತ ಫಲಾನುಭವಿಗಳು ವೆಬ್‌ಸೈಟ್ http ://adcl.karnataka.in ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 214, ಬೀರಸಂದ್ರ, ಚಪ್ಪರದಕಲ್ಲು, ದೇವನಹಳ್ಳಿ ತಾಲ್ಲೂಕು, ದೂ.ಸಂ.: 080-29781036, ಇ-ಮೇಲ್:- distmanager02@yahoo.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.