Site icon Harithalekhani

ಬೆಂಗಳೂರಿನಲ್ಲಿ ಐಸಿಸ್ ಶಂಕಿತ ಉಗ್ರನ ಬಂಧಿಸಿದ ಎನ್ಐಎ

ಬೆಂಗಳೂರು: ಬಸವನಗುಡಿಯಲ್ಲಿ ಶಂಕಿತ ಐಸಿಸಿ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ)ಯ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತನನ್ನು ಬಸವನಗುಡಿ ನಿವಾಸಿ ಅಬ್ದುರ್ ರೆಹಮಾನ್(28)ಎಂದು ಗುರುತಿಸಲಾಗಿದ್ದು,ಖಾಸಗಿ ಆಸ್ಪತ್ರೆಯಲ್ಲಿ ನೇತ್ರ ತಜ್ಞನಾಗಿದ್ದ,

ಬಂಧಿತನಿಂದ ಫೋನ್,ಲ್ಯಾಪ್ ಟಾಪ್ ಹಾಗೂ ಡಿಜಿಟಲ್ ಡಿವೈಸ್ ಗಳನ್ನ ಎನ್‍ಐಎ ವಶಪಡಿಸಿಕೊಂಡಿದೆ. 

ವಿಚಾರಣೆ ವೇಳೆ, ತನಗೆ ಐಸಿಸ್ ನಂಟಿರುವ ಬಗ್ಗೆ ರೆಹಮಾನ್ ಒಪ್ಪಿಕೊಂಡಿದ್ದು,2014ರಲ್ಲಿ ಸಿರಿಯಾಗೆ ಭೇಟಿ ನೀಡಿದ್ದು, ಈ ವೇಳೆ ಐಸಿಸ್ ಉಗ್ರರಿಗೆ ಚಿಕಿತ್ಸೆ ನೀಡಿದ್ದೇನೆ. ಅಲ್ಲದೆ 10 ದಿನಗಳ ಕಾಲ ಸಿರಿಯಾದಲ್ಲಿದ್ದು ಚಿಕಿತ್ಸೆ ನೀಡಿ ವಾಪಸ್ ಆಗಿದ್ದರ ಬಗ್ಗೆಯೂ ಅಬ್ದುರ್ ರೆಹಮಾನ್ ತಿಳಿಸಿದ್ದಾನೆ.ಅಲ್ಲದೆ ಸ್ಥಳೀಯ ಐಸಿಸ್ ಉಗ್ರರಿಗೆ ವೈದ್ಯಕೀಯ ವಿಚಾರದಲ್ಲಿ ನೆರವಾಗಿರುವ ಬಗ್ಗೆಯೂ ಬಾಯ್ಬಿಟ್ಟಿದ್ದಾನೆ.

Exit mobile version