ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಈ ಕುರಿತು ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ.
ಕರೊನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿ ಎಂದಿದ್ದಾರೆ.
ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ
ಇದಕ್ಕು ಮುನ್ನ ಸರ್ಕಾರದ ಆದೇಶದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡದಿರುವ ಕುರಿತು.ಹಿಂದು ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದವು.ಅಲ್ಲದೆ,ಮದುವೆ ಮುಂಜಿಗೆ ಅವಕಾಶ ಇರುವಾಗ ತಿಲಕರ ಕನಸಿನ ರಾಷ್ಟ್ರೀಯ ಉತ್ಸವಕ್ಕೆ ನಿರ್ಬಂಧ ಯಾಕೆ ಬೇಕು? ಸಹಜ ಜನಜೀವನಕ್ಕೆ ಗಣೇಶ ಹಬ್ಬ ಮುನ್ನುಡಿಯಾಗಲಿ ಎನ್ನುವ ಒತ್ತಾಯ ಕೇಳಿ ಬಂದಿತ್ತು.