Site icon Harithalekhani

ರಾಜ್ಯದ ರೈತರಿಗೆ ರಸಗೊಬ್ಬರ ಪೂರೈಸಲು ತಕ್ಷಣ ಕ್ರಮಕೈಗೊಳ್ಳಿ: ಹೆಚ್.ಡಿ.ಕೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ‌.

ಟ್ವಿಟ್ ಮೂಲಕ ಸರ್ಕಾರವನ್ನು ಒತ್ತಾಯಿಸಿರುವ ಅವರು.ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು.

ವಾಡಿಕೆಗಿಂತ ಈ ಬಾರಿ ರಾಜ್ಯದಾದ್ಯಂತ ಶೇಕಡ 25ರಷ್ಟು ಹೆಚ್ಚು ಬಿತ್ತನೆ ಆಗಿದೆ. ಕೃಷಿ ಇಲಾಖೆ ಇದನ್ನು ಅಂದಾಜಿಸುವಲ್ಲಿ ಎಡವಿರುವುದು ಮೇಲ್ನೋಟಕ್ಕೆ ಗೋಚರವಾಗುತ್ತದೆ. ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು.ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಗೊಬ್ಬರ ಕೊರತೆಯಿಂದ ಬಿತ್ತನೆ ಕಾರ್ಯ ನಿಲ್ಲಿಸದಂತೆ ತುರ್ತು ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ ಎಂದಿದ್ದಾರೆ.

Exit mobile version