ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಭಾನುವಾರದ ಬುಲೆಟಿನ್ ಮಾಹಿತಿಯಂತೆ ತಾಲೂಕಿನ ಒಂಬತ್ತು ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ.
ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ ಭಾನುವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 7 ಪುರುಷರು ಹಾಗೂ ಇಬ್ಬರು ಮಹಿಳೆಯರು ಸೇರಿ ಒಂಬತ್ತು ಜನರಿಗೆ ಸೋಂಕು ದೃಡಪಟ್ಟಿದೆ.
ಹರಿತಲೇಖನಿಗೆ ದೊರಕಿರುವ ವರದಿಯಂತೆ. ತ್ಯಾಗರಾಜನಗರ 2 ಹಾಗೂ ದೇವರಾಜನಗರ, ಇಸ್ಲಾಂಪುರ, ಪಾಲನಜೋಗಹಳ್ಳಿ, ಆರೂಢಿ, ವಿದ್ಯಾನಗರ, ದೊಡ್ಡಬಳ್ಳಾಪುರ, ಕರೇನಹಳ್ಳಿಯ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.
ಪ್ರಸ್ತುತ ತಾಲೂಕಿನಲ್ಲಿ 894 ಮಂದಿಗೆ ಸೋಂಕು ತಗುಲಿದ್ದು, 581 ಮಂದಿ ಗುಣಮುಖರಾಗಿದ್ದರೆ 20 ಮಂದಿ ಸಾವನಪ್ಪಿದ್ದಾರೆ.
ಸೋಂಕಿಗೆ ಒಳಗಾದ 44 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 249 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.