Site icon Harithalekhani

ರಾಯಣ್ಣನ ಪ್ರತಿಮೆಸ್ಥಾಪನೆ ಕುರಿತು ರಾಜ್ಯ ಸರ್ಕಾರ ನಿರ್ಲಕ್ಷದಿಂದ ವಿವಾದ: ಸಿದ್ದರಾಮಯ್ಯ

ಬೆಂಗಳೂರು: ಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ‌ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ರಾಯಣ್ಣ ಪ್ರತಿಮೆ ಸ್ಥಾಪನೆ‌ ಕುರಿತು ಇಂದು ನಡೆದಿರುವ ಗಲಭೆ ಕುರಿತು ಟ್ವಿಟ್ ಮಾಡಿರುವ ಅವರು, ನಾನು ಈಗಷ್ಟೆ ಅಲ್ಲಿನ ಜಿಲ್ಲಾಧಿಕಾರಿ‌ ಮತ್ತು ಪೊಲೀಸ್ ಕಮಿಷನರ್ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ತಿಳಿಸಿದ್ದೇನೆ. 

ಸಂಗೊಳ್ಳಿ‌ ರಾಯಣ್ಣನ ಪ್ರತಿಮೆಸ್ಥಾಪನೆಯನ್ನು ರಾಜ್ಯ ಬಿಜೆಪಿ ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ.ನೆಲ,ಜಲ,ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ  ರಾಜಿ  ಸಲ್ಲದು.

ಕನ್ನಡ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿಗಳು‌ ಕೂಡಾ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು ಎಂದಿದ್ದಾರೆ.

Exit mobile version