ಕಲಬುರಬಗಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐ.ಎ.ಎಸ್.ಅಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಶನಿವಾರ ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು.
ಕಲಬರಗಿ ಜಿಲ್ಲಾಧಿಕಾರಿಯಾಗಿದ್ದ ಶರತ್ ಬಿ. ಅವರನ್ನು ಶುಕ್ರವಾರ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿತ್ತು. ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಕಲಬುರಗಿ ಜಿಲ್ಲೆಯ ಮೊದಲ ಮಹಿಳಾ ಜಿಲ್ಲಾಧಿಕಾರಿಗಳಾಗಿದ್ದಾರೆ.
2010ನೇ ಬ್ಯಾಚಿನ ಐ.ಎ.ಎಸ್.ಅಧಿಕಾರಿಯಾಗಿರುವ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರು ಪ್ರಸ್ತುತ ಕರ್ನಾಟಕ ಕಟ್ಟಡ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇವರು ಈ ಹಿಂದೆ 2013ನೇ ಸಾಲಿನಲ್ಲಿ ಫೆಬ್ರವರಿ 18ರಿಂದ ಜೂನ್ 15ರ ವರೆಗೆ, ಸೆಪ್ಟೆಂಬರ್ 5 ರಿಂದ ಡಿಸೆಂಬರ್ 12ರ ವರೆಗೆ ಹಾಗೂ ಡಿಸೆಂಬರ್ 29 ರಿಂದ ಡಿಸೆಂಬರ್ 31ರ ವರೆಗೆ ಕಲಬುರಗಿ ಜಿಲ್ಲೆಯ ಸೇಡಂ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.