Site icon ಹರಿತಲೇಖನಿ

ಕರೊನಾ ಸೋಂಕಿತರ ಪತ್ತೆಗಾಗಿ ಹೆಚ್ಚು ಪರೀಕ್ಷೆ ನಡೆಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತ

Channel Gowda
Hukukudi trust

ದೊಡ್ಡಬಳ್ಳಾಪುರ: ಕರೊನಾ ಸೋಂಕಿತರ ಪತ್ತೆಗಾಗಿ, ಜಿಲ್ಲೆಯಲ್ಲಿ ಹೆಚ್ಚು ಕೊರೋನಾ ಪರೀಕ್ಷೆಗಳನ್ನು ನಡೆಸಬೇಕು ಮತ್ತು ಸೋಂಕಿರ ಪ್ರಾಥಮಿಕ ಸಂಪರ್ಕ ಹಾಗೂ ದ್ವಿತೀಯ ಸಂಪರ್ಕಿತ ವ್ಯಕ್ತಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ, ಕರೊನಾ ಪರೀಕ್ಷೆಗೆ ಒಳಪಡಿಸುವ ಮೂಲಕ ಕರೊನಾ ಹರಡುವಿಕೆಯನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

Aravind, BLN Swamy, Lingapura

ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿಂದು ನಡೆದ “ಕರೊನಾ ವೈರಸ್/ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ತೆಗೆದುಕೊಂಡ ಕ್ರಮಗಳ ಕುರಿತ ಪರಿಶೀಲನಾ ಸಭೆಯ” ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇದರ ಅನುಗುಣವಾಗಿ ಹೆಚ್ಚು ಆಸ್ಪತ್ರೆಗಳನ್ನು ಗುರ್ತಿಸಿಕೊಂಡು, ಹೆಚ್ಚುವರಿ

Aravind, BLN Swamy, Lingapura

ಹಾಸಿಗೆಗಳನ್ನು ಸೃಷ್ಟಿಸಲು  ಹೇಳಿದರಲ್ಲದೆ ಜಿಲ್ಲೆಯಲ್ಲಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸಲು ಅಗತ್ಯವಿರುವ ಮಾನವ ಸಂಪನ್ಮೂಲವನ್ನು ಭರ್ತಿಮಾಡಲು, ಜಿಲ್ಲಾಧಿಕಾರಿಗಳು ಕೂಡಲೇ ಪ್ರಸ್ತಾವನೆ, ಸಲ್ಲಿಸಿದರೆ ಕೂಡಲೇ ಸರ್ಕಾರದ ಅನುಮತಿ ಪಡೆಯಲು ಕ್ರಮ ತೆಗದುಕೊಳ್ಳಲಾಗುವುದು ಎಂದು ತಿಳಿಸಿದರು.

ಡಯಾಲಿಸಿಸ್ ಹಾಗೂ ಇನ್ನಿತರ ತೀವ್ರ ಆರೋಗ್ಯ ಸಮಸ್ಯೆಯಿಂದ  ಬಳುತ್ತಿರುವರಿಗೆ ತಾಲ್ಲೂಕು ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು, ಅಗತ್ಯವಿದ್ದರೆ ಹೆಚ್ಚಿನ ಚಿಕಿತ್ಸೆಗೆ  ಸಂಬಂದಿಸಿದ ಆಸ್ಪತ್ರೆಗಳಿಗೆ ದಾಖಲಿಸಿ ಶೀಘ್ರವಾಗಿ ಚಿಕಿತ್ಸೆ ದೊರಕಿಸಲು ಕ್ರಮ ವಹಿಸಬೇಕು ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ. ಎನ್.ರವೀಂದ್ರ ಅವರು ಮಾತನಾಡಿ ಕರೊನಾ  ಸೋಕಿತರಿಗಾಗಿಯೇ ಜಿಲ್ಲೆಯ ಸರ್ಕಾರಿ ಹಾಗೂ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆಯಲಾಗಿದೆ. 51 ಗಂಟಲು ದ್ರವ ಮಾದರಿ ಸಂಗ್ರಹ  ಕೇಂದ್ರಗಳು, 61 ಫೀವರ್  ಕ್ಲಿನಿಕ್‌ಗಳು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಹೋಮ್ ಐಸೋಲೇಷನ್ ಹಾಗೂ ಕ್ವಾರಂಟೈನ್ ಸೆಂಟರ್‌ಗಳಲ್ಲಿರುವ ಕರೊನಾ ಸೊಂಕಿತರಿಗೆ ಸರಿಯಾದ ಚಿಕಿತ್ಸೆ ನೀಡಲಾಗುತ್ತಿದೆ ಎಂದರಲ್ಲದೆ ಕರೊನಾ ಸೋಂಕಿನಿಂದ ಮೃತರಾದವರ ದೇಹವನ್ನು ಸಾಗಿಸಲು ತಾಲ್ಲೂಕುವಾರು ಒಂದು ಆಂಬುಲೆನ್ಸ್‌‌ಅನ್ನು ಮೀಸಲಿಡಲಾಗಿದೆ ಎಂದು ಹೇಳಿದರು. 

ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕರೊನಾ ರೋಗಿಗಳ ಚಿಕಿತ್ಸೆ ಯೊಂದಿಗೆ ಇತರೆ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೂ  ಚಿಕಿತ್ಸೆಯಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಸೂಕ್ತ ರೀತಿಯಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸಬೇಕು ಹಾಗೂ ಔಷಧಿ ವಿತರಣೆಯಲ್ಲಿ ಕೊರತೆ ಉಂಟಾಗದಂತೆ ಎಚ್ಚರವಹಿಸಲು ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ   ಧರ್ಮೇಂದ್ರ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ನಾಲ್ಕು ತಾಲ್ಲೂಕುಗಳ ತಹಶೀಲ್ದಾರ್‌ಗಳು ಉಪಸ್ಥಿತರಿದ್ದರು.

Exit mobile version