ಜಿಲ್ಲಾ ಕೇಂದ್ರದ ಹೆಸರು ಬದಲಿಸಲು ಪಟ್ಟುಹಿಡಿದಲ್ಲಿ ನಿಸರ್ಗ ನಾರಾಯಣಸ್ವಾಮಿಗೆ ಘೇರಾವ್: ರಾಜಘಟ್ಟರವಿ

ದೊಡ್ಡಬಳ್ಳಾಪುರ: ತನ್ನ ಸ್ವಾರ್ಥ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಜಿಲ್ಲಾ ಕೇಂದ್ರದ ಹೆಸರನ್ನು ದೇವನಹಳ್ಳಿಯನ್ನಾಗಿ ಬದಲಿಸುವ ಹುನ್ನಾರ ನಡೆಸುತ್ತಿರುವ ನಿಸರ್ಗ ನಾರಾಯಣಸ್ವಾಮಿ ತಮ್ಮ‌ ನಿಲುವು ಬದಲಿಸಿಕೊಳ್ಳದಿದ್ದರೆ ದೊಡ್ಡಬಳ್ಳಾಪುರ ತಾಲ್ಲೂಕಿಗೆ ಬರದಂತೆ  ಘೇರಾವ್ ಹಾಕಲಾಗುವುದೆಂದು ಕರವೆ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ ಎಚ್ಚರಿಕೆ ನೀಡಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ಕರವೆ ಪ್ರವೀಣ್ ಶೆಟ್ಟಿ ಬಣದ ತಾಲೂಕು ಘಟದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು,

ಜಿಲ್ಲಾ ಕೇಂದ್ರಕ್ಕೆ ಹೊಂದಿರಬೇಕಾದ ನಗರಸಭೆ, ಬೌಗೋಳಿಕ ವಿಸ್ತೀರ್ಣ, ಸರ್ಕಾರಕ್ಕೆ ವರಮಾನ, ಉಪವಿಭಾಗಾಧಿಕಾರಿ ಕಚೇರಿ ಸೇರಿದಂತೆ ಎಲ್ಲಾ ಅರ್ಹತೆ ಇದ್ದರು ಜಿಲ್ಲಾ ಕೇಂದ್ರ ದೊಡ್ಡಬಳ್ಳಾಪುರಕ್ಕೆ ಬರುವುದು ತಾಲೂಕಿನ ಜನ ಪ್ರತಿನಿಧಿಗಳ ವೈಪಲ್ಯ ಕಾರಣವೆಂದು ಕೈತಪ್ಪಿತು.

ಆ ವೇಳೆ ತೀವ್ರ ಹೋರಾಟ,ನ್ಯಾಯಾಲಯದ ಮೆಟ್ಟಿಲೇರುವ ಕ್ರಮಕ್ಕೆ ಮುಂದಾದರು ಸಹ ಜಿಲ್ಲೆಯ ಎಲ್ಲಾ ತಾಲೂಕಿಗೆ ಅನುಕೂಲವಾಗಲೆಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಜನತೆ ಹೃದಯ ವೈಶಾಲ್ಯ ಪ್ರದರ್ಶಿಸಿ ಸರ್ಕಾರದ ತೀರ್ಮಾನಕ್ಕೆ ಒಪ್ಪಿದ್ದರು. ಆದರೆ ಇಡೀ ಪ್ರಕ್ರಿಯೆಯಲ್ಲಿ ಎಲ್ಲೂ ಇರದ ಜಿಲ್ಲಾ ಕೇಂದ್ರ ಹೆಸರು ಬದಲಾವಣೆ ಪ್ರಸ್ತಾಪವನ್ನು ಆ ವೇಳೆ ಎಲ್ಲೋ ಇದ್ದ ನಿಸರ್ಗ ನಾರಾಯಣಸ್ವಾಮಿ ಶಾಸಕರೆಂಬ ಕಾರಣಕ್ಕೆ ತನ್ನ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಈಗ ಜಿಲ್ಲಾ ಕೇಂದ್ರದ ಹೆಸರನ್ನು ಒಂದು ತಾಲೂಕಿಗೆ ಸೀಮಿತಗೊಳಿಸುವ ಮೂಲಕ ಜಿಲ್ಲೆಯ ಇತರ ತಾಲೂಕಿನ ಜನರ ಭಾವನೆಗಳಿಗೆ ಕೊಳ್ಳಿಇಡುತ್ತಿದ್ದಾರೆ. ಕೂಡಲೇ ಈ ಶಡ್ಯಂತ್ರವನ್ನು ನಿಸರ್ಗ ನಾರಾಯಣಸ್ವಾಮಿ ಬಿಡಬೇಕಿದೆ ಇಲ್ಲವಾದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿಗೆ ಕಾಲಿಡಲು ಸಹ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ ನಿಲುವಿಗೆ ಒತ್ತಾಯ 

ಗೌರವ ಅಧ್ಯಕ್ಷ ಪು.ಮಹೇಶ್, ನಗರ ಅಧ್ಯಕ್ಷ ಶ್ರೀ ನಗರ ಬಶೀರ್ ಮಾತನಾಡಿ, ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಜನರ ಬಲಹೀನರೆಂದು ತಿಳಿದ್ದಿದ್ದರೆ ಅದೂ ತಪ್ಪು,

ಜಿಲ್ಲೆಯ ಹೆಸರು ಬದಲಿಸಲು ಮುಂದಾಗುವ ಮೂಲಕ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ  ತಾಲೂಕಿನ ಸಹೋದರತ್ವಕ್ಕೆ ಕೊಳ್ಳಿ ಇಡುತ್ತಿದ್ದಾರೆ.ಇದನ್ನು ಈ ಕೂಡಲೆ ಬಿಡಬೇಕಿದೆ ಇಲ್ಲವಾದಲ್ಲಿ ಇಡೀ ತಾಲೂಕಿನ ಜನತೆ ಹೋರಾಟಕ್ಕೆ ಇಳಿಯಲಿದ್ದಾರೆ‌.ತಾಲೂಕಿನ ಶಾಸಕ ಟಿ.ವೆಂಕಟರಮಣಯ್ಯ ಕೂಡಲೇ ಮಧ್ಯಪ್ರವೇಶ ಮಾಡಬೇಕಿದ್ದು ತಾಲೂಕಿಗೆ ಉಂಟಾಗುತ್ತಿರುವ ಅನ್ಯಾಯದ ವಿರುದ್ದ ತಮ್ಮ ನಿಲುವು ತಿಳಿಸಬೇಕೆಂದು ಒತ್ತಾಯಿಸಿದರು.

ಕಾನೂನು ಸಲಹೆಗಾರರ ಆನಂದ್ ಕುಮಾರ್ ಮಾತನಾಡಿ,ಶಾಸಕರಾಗಿ ನಿಸರ್ಗ ನಾರಾಯಣಸ್ವಾಮಿ ಬೇಜವಬ್ದಾರಿ ಹೇಳಿಕೆ ನೀಡುವುದನ್ನು ಬಿಡಬೇಕಿದೆ.ಬೆಂ.ಗ್ರಾ.ಜಿಲ್ಲೆ ನಾಲ್ಕು ತಾಲೂಕಿಗೆ ಸೇರಿ ಜಿಲ್ಲೆಯಾಗಿದ್ದು ಎಲ್ಲಾ ತಾಲೂಕಿನ ಜನರ ಭಾವನೆಗೆ ಮನ್ನಣೆಕೊಡುವುದನ್ನ ಶಾಸಕರಾದವರು ತಿಳಿಯಬೇಕಿದೆ,ನಾಲ್ಕು ತಾಲೂಕಿಗೂ ತಮ್ಮದೆ ಆದ ಅಸ್ಥಿತ್ವ,ಸ್ಥಾನ ಮಾನ ಹೊಂದಿವೆ ಎಂಬುದನ್ನ ಅರಿತು ವರ್ತಿಸಬೇಕೆಂದರು.

ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಬದಲಾವಣೆಯ ಯಾವುದೇ ಪ್ರಯತ್ನ ನಡೆಸಬಾರದೆಂದು ತಹಶಿಲ್ದಾರ್ ಟಿ.ಎಸ್.ಶಿವರಾಜ್ ಮೂಲಕ ‌ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್, ಕಾರ್ಯದರ್ಶಿ ಜೋಗಹಳ್ಳಿ ಅಮ್ಮು, ನಗರ ಪ್ರಧಾನ ಕಾರ್ಯದರ್ಶಿ ಸುಬ್ರಮಣಿ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಹೆಮಂತ್, ಸದಸ್ಯರಾದ ಸೂರಿ,ಮುರುಳಿ,ಶ್ರೀನಿವಾಸ್,ಅಂಬರೀಶ್ ಮತ್ತಿತರರಿದ್ದರು.

ರಾಜಕೀಯ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ ಎಂದು ಅಭಿಮಾನಿಗಳ ಆಕ್ರೋಶ| Darshan

ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ

ಕೆಲ ಖಾಸಗಿ ಸುದ್ದಿವಾಹಿನಿಗಳ ಬಗ್ಗೆ ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗಡೆ, ಗೃಹಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ Darshan

[ccc_my_favorite_select_button post_id="99206"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]