ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 4 ರಂದು) 133 ಪುರುಷರು ಹಾಗೂ 71 ಮಹಿಳೆಯರು ಸೇರಿದಂತೆ 204 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವರದಿ ತಿಳಿಸಿದೆ.
ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 37 ಪುರುಷರು ಮತ್ತು 15 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 31 ಪುರುಷರು ಮತ್ತು 14 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 10 ಪುರುಷರು ಮತ್ತು 10 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 7 ಪುರುಷರು ಹಾಗೂ 2 ಮಹಿಯರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲೂಕು ಆಡಳಿತದ ವರದಿ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ವರದಿ ಗೊಂದಲದ ಕಾರಣ ಹರಿತಲೇಖನಿ ಜಿಲ್ಲಾ ಆರೋಗ್ಯ ಇಲಾಖೆ ವರದಿ ಪ್ರಕಟಿಸುತ್ತಿಲ್ಲ.