ದೊಡ್ಡಬಳ್ಳಾಪುರ: ಲಾಕ್‌ಡೌನ್‌ನಿಂದಾಗಿ ಆರ್‌ಬಿಐ ಸಾಲಗಾರರಿಗೆ ನೀಡಿರುವ ವಿನಾಯಿತಿ ಹಾಗೂ ನಿರ್ದೇಶನವನ್ನು ಉಲ್ಲಂಘಿಸಿ ಮೈಕ್ರೋ ಫೈನಾನ್ಸ್‌ಗಳು ಸಾಲಗಾರರಿಗೆ ಒತ್ತಡ ಹಾಗೂ ಎಚ್ಚರಿಕೆ ನೀಡುವ ದೂರುಗಳು ಬಂದರೆ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು “ಕೋವಿಡ್ ಹಾಗೂ ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು ಹಕ್ಕೊತ್ತಾಯ ಕುರಿತ ಸಭೆ”ಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಅವರು ಮಾತನಾಡಿದರು.
ನೇಯ್ಗೆ ಉದ್ಯಮದಲ್ಲಿ ತೊಡಗಿರುವ ಎಲ್ಲಾ ಕಾರ್ಮಿಕರಿಗೂ ಗುರುತಿನ ಚೀಟಿ ನೀಡಲು ಹಾಗೂ ಅಸಂಘಟಿತ ಕಾರ್ಮಿಕ ವಲಯ ಎಂದು ಗುರುತಿಸಲು ಈಗಾಗಲೇ ಸರ್ಕಾರಕ್ಕೆ ಜವಳಿ ಮತ್ತು ಕೈಮಗ್ಗ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ರಾಜ್ಯ ಸರ್ಕಾರ ನೇಕಾರರಿಗೆ ಘೋಷಣೆ ಮಾಡಿರುವ 2000 ಸಾವಿರ ರೂಪಾಯಿಗಳನ್ನು ಪಡೆಯಲು ಮಾಲೀಕರು ತಮ್ಮ ಬಳಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸಹಕರಿಸಿ ಅವರಿಗೆ ಅನುಕೂಲವಾಗುವಂತೆ ನಡೆದುಕೊಳ್ಳಲು ಸೂಚಿಸಿದರು ಹಾಗೂ ಈಗಾಗಲೇ ಸಲ್ಲಿಸಿರುವ ಅರ್ಜಿಗಳಲ್ಲಿ ಕೆಲವರಿಗೆ ಹಣ ಮಂಜೂರಾಗಿದ್ದು, ಬಾಕಿ ಉಳಿದಿರುವ ಅರ್ಜಿಗಳನ್ನು ಮಂಜೂರು ಮಾಡುವಂತೆ ಕ್ರವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ನೇಯ್ಗೆ ಉದ್ಯಮ ಚೇತರಿಸಿಕೊಳ್ಳುವ ಸಲುವಾಗಿ ಬೆಸ್ಕಾಂ ಅಧಿಕಾರಿಗಳು ವಿದ್ಯುತ್ ಬಿಲ್ ಪಾವತಿಯನ್ನು ಹಂತ ಹಂತವಾಗಿ ಪಾವತಿಸಲು ಅನುವು ಮಾಡಿಕೊಡಬೇಕು. ಯಾವುದೇ ಸೂಚನೆಯಿಲ್ಲದೆ ವಿದ್ಯುತ್ ಸಂಪರ್ಕ ಕಡಿತ ಮಾಡಬಾರದು. ಕೆಲವು ದಿನಗಳ ವಿನಾಯಿತಿ ನೀಡಿ ಅನಂತರ ಕ್ರಮವಹಿಸಲು ಸೂಚಿಸಿದರು.
ಅಂಗನವಾಡಿ ಕಾರ್ಯಕರ್ತರ ಮನವಿಯನ್ನು ಸ್ವೀಕರಿಸಿ, ಸರ್ಕಾರದ ಆದೇಶದ ಮೇರೆಗೆ ವರ್ಗಾವಣೆಯಾದ ಅಂಗನವಾಡಿ ಕಾರ್ಯಕತೆಯರು ಹಾಗೂ ಸಹಾಯಕರನ್ನು ವರ್ಗಾವಣೆಯಾದ ಊರಿನ ಜನರು ಕಾರ್ಯನಿರ್ವಹಿಸಲು ಅಡಚಣೆ ಉಂಟು ಮಾಡಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಅಂತವರ ವಿರುದ್ಧ ಸೂಕ್ತ ಕಠಿಣ ಕ್ರಮ ಕೈಗೊಂಡು ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎನ್‌ನಾಗರಾಜ, ಅಪರ ಜಿಲ್ಲಾಧಿಕಾರಿ ಡಾ: ಜಗದೀಶ್.ಕೆ.ನಾಯಕ್, ಉಪವಿಭಾಗಾಧಿಕಾರಿ ಅರುಳ್‌ಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರ್‌ಗಳು ಹಾಗೂ ಇತರರು ಉಪಸ್ಥಿತರಿದ್ದರು.