Site icon Harithalekhani

ದೊಡ್ಡಬಳ್ಳಾಪುರ: ಶಿಕ್ಷಕರ ದಿನಾಚರಣೆಯನ್ನು ಕರಾಳ ದಿನವನ್ನಾಗಿ ಆಚರಿಸಿದ ಎಂಎಸ್ ವಿ ಶಾಲೆ..!

ದೊಡ್ಡಬಳ್ಳಾಪುರ: ನಗರದ ಎಂಎಸ್ ವಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಕರಾಳ ದಿನವನ್ನಾಗಿ ಆಚರಿಸಲಾಯಿತು.

ಕೊವಿಡ್-19 ತಡೆಗಟ್ಟಲು ಘೋಷಿಸಲಾದ ಲಾಕ್ ಡೌನ್  ಸಮಯದಲ್ಲಿ ಖಾಸಗಿ ಶಾಲಾ ಶಿಕ್ಷಕರನ್ನು, ಶಿಕ್ಷಣ ಸಂಸ್ಥೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿರುವ ಸರ್ಕಾರದ ಧೋರಣೆಯನ್ನು ಶಾಲಾ ಸಿಬ್ಬಂದಿ ಕೈಗೆ ಕಪ್ಪು ಪಟ್ಟಿ ಧರಿಸುವ ಮೂಲಕ ಖಂಡಿಸಿದರು.

ಈ ಕ್ಷೇತ್ರವನ್ನು ನಂಬಿಕೊಂಡು ಬದುಕನ್ನು ಕಟ್ಟಿಕೊಂಡಿರುವ ಲಕ್ಷಾಂತರ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಸ್ಥಿತಿ ಅತಂತ್ರವಾಗಿದೆ ಎಂಬ ಆಕ್ರೋಶ  ವ್ಯಕ್ತವಾಯಿತು.

ಇದಕ್ಕು ಮುನ್ನ ಶಿಕ್ಷಕರ ದಿನಾಚರಣೆಯ ಅಂಗವಾಗಿ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷ ಎ.ಸುಬ್ರಮಣ್ಯ, ಪ್ರಾಂಶುಪಾಲರು ಮತ್ತು ಸಹ ಶಿಕ್ಷಕರು ಭಾಗವಹಿಸಿದ್ದರು.

Exit mobile version