ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 115 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 123 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ, ಶುಕ್ರವಾರ ಸಂಜೆಯವರಗೆ, ದೊಡ್ಡಬಳ್ಳಾಪುರ ತಾಲೂಕಿನ 54 ಪುರುಷರು ಹಾಗೂ 61 ಮಹಿಳೆಯರು ಸೇರಿ 115 ಜನರಿಗೆ ಸೋಂಕು ದೃಢಪಟ್ಟಿದೆ.
ತಾಲೂಕಿನಲ್ಲಿ ಕೋವಿಡ್-19 ತಪಾಸಣಾ ಕಾರ್ಯವನ್ನು ಆರೋಗ್ಯ ಇಲಾಖೆ ತೀವ್ರಗೊಳಿಸಿದ್ದು, ಹಾಡೋನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ತಪಾಸಣೆ ನಡೆಸಲಾಯಿತು. ಜಿಲ್ಲಾ ಪಂಚಾಯಿತಿ ಸದಸ್ಯ ಹೆಚ್.ಅಪ್ಪಯ್ಯಣ್ಣ ಆದಿಯಾಗಿ ಅನೇಕರು ಸೋಂಕಿನ ತಪಾಸಣೆಗೆ ಒಳಗಾದರು.
ಪ್ರಸ್ತುತ ತಾಲೂಕಿನಲ್ಲಿ 3880 ಮಂದಿಗೆ ಕರೊನಾ ಸೋಂಕು ತಗುಲಿದ್ದು 3129 ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ ಸೋಂಕಿಗೆ ಒಳಗಾದ 56 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 695 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.