ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತವನ್ನು ಹಳ್ಳಿ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ‘ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಫೆ.20ರಂದು ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಚಾಲನೆ ನೀಡಲಿದ್ದಾರೆ.
ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಸರ್ಕಾರದ ಆದೇಶದ ಅನ್ವಯ ಕಾರ್ಯಕ್ರಮಕ್ಕೆ ಫೆಬ್ರವರಿ 20 ರಂದು ರಾಜ್ಯಾದ್ಯಂತ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದ್ದು, ಅಂತೆಯೇ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿಯಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಅಂದು ಕಂದಾಯ ಸಚಿವರು ಸಹ ನಮ್ಮ ಜೊತೆ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ ಎಂದವರು ತಿಳಿಸಿದ್ದಾರೆ.
ಹಳ್ಳಿಯ ಜನರು ಸಣ್ಣಪುಟ್ಟ ಸಮಸ್ಯೆ ಎದುರಾದಾಗಾಲೂ ಜಿಲ್ಲಾಧಿಕಾರಿ, ತಹಸೀಲ್ದಾರ್ ಕಚೇರಿಗೆ ಅಲೆಯುವ ಪರಿಸ್ಥಿತಿಯಿದೆ. ಇದನ್ನು ತಪ್ಪಿಸಲು ಈ ಕಾರ್ಯಕ್ರಮ ರೂಪಿಸಲಾಗಿದೆ. ‘ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ’ ಯೋಜನೆಯ ಅನುಸಾರ ಡಿಸಿಗಳು ಪ್ರತಿ ತಿಂಗಳ ಮೂರನೇ ಶನಿವಾರ ಒಂದು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿನ ಹಳ್ಳಿಯ ಜನರ ಅಹವಾಲು ಸ್ವೀಕರಿಸಿ ಸಮಸ್ಯೆ ಇತ್ಯರ್ಥ ಪಡಿಸಬೇಕು,”
ಈ ಕಾರ್ಯಕ್ರಮದಲ್ಲಿ ಪಿಂಚಣಿ, ಆಶ್ರಯ ಯೋಜನೆ, ಸ್ಮಶಾನ, ಫವತಿ ಖಾತೆ, ಪಹಣಿ ತಿದ್ದುಪಡಿ, ಭೂ ಒತ್ತುವರಿ ತೆರವು, ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಪರಿಶೀಲನೆ ಹಾಗೂ ಪರಿಹಾರ ನೀಡುವುದು, ಅರ್ಹ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಹಂಚಿಕೆ, ಪೋಡಿ ಪ್ರಕರಣ ಇತ್ಯರ್ಥ, ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದ ಅಡೆತಡೆ ನಿವಾರಣೆ ಸಂಬಂಧ ಡಿಸಿಗಳ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.