Site icon ಹರಿತಲೇಖನಿ

ಹೊಸಹಳ್ಳಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿದ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್

Channel Gowda
Hukukudi trust

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿಯಲ್ಲಿಂದು “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ” ಎಂಬ ರಾಜ್ಯ ಮಟ್ಟದ ವಿನೂತನ ಕಾರ್ಯಕ್ರಮದ ಅಂಗವಾಗಿ  ಹೊಸಹಳ್ಳಿ ಗ್ರಾಮಸ್ಥರಾದ ವೆಂಕಟಲಕ್ಷ್ಮಮ್ಮ ಅವರ ಮನೆಯ ಆವರಣದಲ್ಲಿ  ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ್ ಹಾಗೂ ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಶ್ರೀನಿವಾಸ್ ಅವರು ಹೊಸಹಳ್ಳಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಅಹವಾಲುಗಳನ್ನು  ಸ್ವೀಕರಿಸಿದರು.

Aravind, BLN Swamy, Lingapura

ಇದಕ್ಕು ಮುನ್ನ ಗ್ರಾಮಸ್ಥರಾದ ವೆಂಕಟಲಕ್ಷ್ಮಮ್ಮ ಅವರ ಕುಟುಂಬಸ್ಥರು ಆರತಿ ಬೆಳಗುವ  ಮೂಲಕ ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ ಅವರನ್ನು  ಸ್ವಾಗತಿಸಿದರು. ನಂತರ ವೆಂಕಟಲಕ್ಷ್ಮಮ್ಮ ಅವರ ಮನೆಯಲ್ಲಿ ಸಚಿವರು ಬೆಳಗಿನ ಉಪಹಾರ ಸೇವಿಸಿದರು.

ಈ ವೇಳೆ ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ನವೀನ್‌ರಾಜ್‌‌ಸಿಂಗ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್,  ದೊಡ್ಡಬಳ್ಳಾಪುರ ಡಿವೈಎಪ್ಪಿ ರಂಗಪ್ಪ ಸೇರಿದಂತೆ ಮತ್ತಿತರರು ಉಪಹಾರ ಸೇವಿಸಿದರು.

Aravind, BLN Swamy, Lingapura

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version