ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಭವನದ ಆವರಣದಲ್ಲಿ ಏಪ್ರಿಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣದ ಶಂಕುಸ್ಥಾಪನೆ

ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಭಾಗಿತ್ವದಲ್ಲಿ, ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ‌ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ *”ಸಂವಿಧಾನ ಶಿಲ್ಪಿ, ಭಾರತರತ್ನ ಡಾ|| ಬಿ.ಆರ್‌.ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣದ ಶಂಕುಸ್ಥಾಪನೆ ಹಾಗೂ ಡಾ||ಬಿ.ಆರ್.ಅಂಬೇಡ್ಕರ್ ಅವರ 130 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಮತ್ತು ಡಾ||ಜಗಜೀವನ್ ರಾಮ್ ಅವರ 114 ನೇ ಜನ್ಮ ದಿನಾಚರಣೆ”* ಕಾರ್ಯಕ್ರಮವನ್ನು ಏಪ್ರಿಲ್ 14 ರಂದು ಬೆಳಿಗ್ಗೆ ‌11.00 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ (ಆಡಿಟೋರಿಯಂ)  ಏರ್ಪಡಿಸಲಾಗಿದೆ.

‌‌‌‌ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ ಅವರು ಡಾ|| ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದು, ಡಾ||ಬಿ.ಆರ್.ಅಂಬೇಡ್ಕರ್ ಅವರ 130ನೇ ಜನ್ಮ ಜಯಂತಿ ಹಾಗೂ ಡಾ|| ಬಾಬು ಜಗಜೀವನ್ ರಾಮ್ ಅವರ 114 ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿಯನ್ನು ವಹಿಸಲಿದ್ದಾರೆ.

ಪೌರಾಡಳಿತ ಹಾಗೂ ಸಕ್ಕರೆ ಸಚಿವರಾದ ಎನ್.ನಾಗರಾಜ್(ಎಂ.ಟಿ.ಬಿ.) ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಬಿ.ಶ್ರೀರಾಮುಲು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ವಿ.ಪ್ರಸಾದ್, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಕೆ.ಶ್ರೀನಿವಾಸಮೂರ್ತಿ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಅ.ದೇವೇಗೌಡ, ಎಸ್.ರವಿ, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ|| ಎನ್. ನಾಗಾಂಬಿಕಾ ದೇವಿ, ಸಮಾಜ ಕಲ್ಯಾಣ ಇಲಾಖೆ ಆಯುಕ್ತರಾದ ಡಾ|| ರವಿಕುಮಾರ ಸುರಪುರ,  ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ಎ.ರವಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ರೂಪ ಮರಿಯಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಸಿ.ಮಂಜುನಾಥ್, ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ವೈ.ಎನ್.ಶಶಿಕಲಾ ಆನಂದ್, ಉಪಾಧ್ಯಕ್ಷರಾದ ಲಲಿತಮ್ಮ, ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗೌರಮ್ಮ ರಾಮಣ್ಣ, ಉಪಾಧ್ಯಕ್ಷರಾದ ಸಿ.ಕಾಂತ ಮುನಿರಾಜು, ಬೀರಸಂದ್ರ ಗ್ರಾಮ ಪಂಚಾಯಿತಿ ಸದಸ್ಯರಾದ ಭೈರೇಗೌಡ, ಕೃಷ್ಣಮ್ಮ ಯಲ್ಲಪ್ಪ ಅವರು ಭಾಗವಹಿಸಲಿದ್ದಾರೆ.

ಡಾ|| ಬಿ.ಆರ್.ಅಂಬೇಡ್ಕರ್ ಹಾಗೂ ಡಾ|| ಬಾಬು ಜಗಜೀವನ್ ರಾಮ್ ಅವರ ಕುರಿತು ಚಿಂತಾಮಣಿಯ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಪದವಿ ಮತ್ತು ಸ್ನಾತಕೋತ್ತರ ಪದವಿ ವಿಭಾಗದ ಮುಖ್ಯಸ್ಥ ಡಾ|| ಎಂ.ಎನ್. ರಘು ಹಾಗೂ ಬೆಂಗಳೂರಿನ‌ ಹಿರಿಯ ಕವಿ ಹಾಗೂ ಚಿಂತಕರಾದ ಡಾ|| ಮೂಡ್ನಾಕೂಡು ಚಿನ್ನಸ್ವಾಮಿ ಅವರು ಉಪನ್ಯಾಸ ನೀಡಲಿದ್ದಾರೆ. ಜಿಲ್ಲೆಯ ಎಲ್ಲಾ ಗೌರವಾನ್ವಿತ ಜಿಲ್ಲಾ ಪಂಚಾಯಿತಿ ಸದಸ್ಯರು, ತಾಲ್ಲೂಕು ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ನಗರಸಭೆ/ ಪುರಸಭೆಗಳ ಅಧ್ಯಕ್ಷರು/ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ದಲಿತಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಹಾಗೂ ಮುಖಂಡರು ಹಾಗೂ  ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚನ್ನಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎಸ್. ಕೃಷ್ಣಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ZP, TP ಚುನಾವಣೆ.. ಮಹತ್ವದ ಸುಳಿವು ನೀಡಿದ ರಾಜ್ಯ ಚುನಾವಣೆ ಅಯುಕ್ತ

ZP, TP ಚುನಾವಣೆ.. ಮಹತ್ವದ ಸುಳಿವು ನೀಡಿದ ರಾಜ್ಯ ಚುನಾವಣೆ ಅಯುಕ್ತ

ZP, TP ಚುನಾವಣೆ ಮಾಡೋದಕ್ಕೆ ಸರ್ಕಾರ ಕೂಡಾ ಸ್ಪಂದನೆ ನೀಡಿದೆ. ಎಪ್ರಿಲ್, ಮೇ ನಲ್ಲಿ ಮಾಡಲು ಸಲಹೆ ಸೂಚನೆ ನೀಡಿದೆ ಎಂದರು.

[ccc_my_favorite_select_button post_id="100849"]
BJP ಸೆಲೆಕ್ಟೆಡ್ ನ್ಯೂಸ್ ಚಾನಲ್ ಗುಂಪಿಗೆ ಚಾಟಿ ಬೀಸಿದ ಸುರ್ಜೆವಾಲ| Video

BJP ಸೆಲೆಕ್ಟೆಡ್ ನ್ಯೂಸ್ ಚಾನಲ್ ಗುಂಪಿಗೆ ಚಾಟಿ ಬೀಸಿದ ಸುರ್ಜೆವಾಲ| Video

BJP ಯಲ್ಲಿನ ವೈಫಲ್ಯ ಮುಚ್ಚಿ ಹಾಕಲು, ಕೆಲ ನ್ಯೂಸ್ ಚಾನಲ್ ಗುಂಪಿನಿಂದ ಈ ವಿಚಾರವನ್ನು ಸೃಷ್ಟಿಸಲಾಗುತ್ತಿದೆ‌.

[ccc_my_favorite_select_button post_id="100819"]
ರೂಪಾಯಿ ಮೌಲ್ಯ ಮಹಾಪತನ..!

ರೂಪಾಯಿ ಮೌಲ್ಯ ಮಹಾಪತನ..!

ಕಳೆದ ಮಂಗಳವಾರ ಹಾಗೂ ಬುಧವಾರ ರೂಪಾಯಿ ಮೌಲ್ಯದಲ್ಲಿ ಅನುಕ್ರಮವಾಗಿ 6 ಹಾಗೂ 17 ಪೈಸೆಯಷ್ಟು ಕುಸಿದಿದ್ದರೆ, ಶುಕ್ರವಾರ 18 ಪೈಸೆಯಷ್ಟು ಕುಸಿದಿತ್ತು. Rupee

[ccc_my_favorite_select_button post_id="100861"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

ಯಾರೋ ದುಷ್ಕರ್ಮಿಗಳು ಹೂವಿನ ಗಿಡಗಳಿಗೆ ಕಳೆನಾಶಕ ಸಿಂಪಡಣೆ ಮಾಡಿದ್ದು, ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತ ಸತೀಶ್ ಬಾಬು ಕಂಗಾಲಾಗಿದ್ದಾರೆ. Herbicide

[ccc_my_favorite_select_button post_id="100832"]
Accident ಭೀಕರ ರಸ್ತೆ ಅಪಘಾತ: ಯುವ ಪತ್ರಕರ್ತ ಭರತ್ ಧಾರುಣ ಸಾವು..!

Accident ಭೀಕರ ರಸ್ತೆ ಅಪಘಾತ: ಯುವ ಪತ್ರಕರ್ತ ಭರತ್ ಧಾರುಣ ಸಾವು..!

ಘಟನೆಯ ವೇಳೆ ಕಾರಿನಲ್ಲಿನ ಏರ್ ಬ್ಯಾಗ್ ಓಪನ್ ಆದರೂ ಜೀವ ಉಳಿಸಲು ಸಾಧ್ಯವಾಗಿಲ್ಲ. Accident

[ccc_my_favorite_select_button post_id="100789"]

ಆರೋಗ್ಯ

ಸಿನಿಮಾ

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ.. ಕ್ರಿಮಿನಲ್ ಕೇಸ್ ದಾಖಲು..!

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ.. ಕ್ರಿಮಿನಲ್ ಕೇಸ್ ದಾಖಲು..!

ಅದರಲ್ಲೂ ವೆಂಕಟೇಶ್ ಅಭಿನಯದ 'ಸಂಕ್ರಾಂತಿಕಿ ವಸ್ತುನ್ನಂ' ಶೀಘ್ರದಲ್ಲೇ ಬಿಡುಗಡೆಯಾಗುತ್ತಿರುವ ಈ ಬೆಳವಣಿಗೆಗಳು victory Venkatesh

[ccc_my_favorite_select_button post_id="100751"]

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು..

[ccc_my_favorite_select_button post_id="100613"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]

Darshan Sudeep| ದಚ್ಚು-ಕಿಚ್ಚ ಅಭಿಮಾನಿಗಳ ನಡುವೆ ತಂದಿಟ್ಟ

[ccc_my_favorite_select_button post_id="99843"]

Pavan kalyan| ದಟ್ ಈಸ್ ರೇವಂತ್ ರೆಡ್ಡಿಗಾರು:

[ccc_my_favorite_select_button post_id="99803"]

Pushpa 2 ಅಲ್ಲು ಅರ್ಜುನ್ ಅವಾಂತರ; ಸಿಎಂ

[ccc_my_favorite_select_button post_id="99541"]

HD Kumaraswamy ಸಮಾಜದ ಶಾಂತಿ ಕಾಪಾಡುವ ಸಿನಿಮಾಗಳು

[ccc_my_favorite_select_button post_id="99321"]
error: Content is protected !!