ದೊಡ್ಡಬಳ್ಳಾಪುರ: ನಗರ ಸೇರಿದಂತೆ ತಾಲ್ಲೂಕಿನಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಭಾನುವಾರ ತಾಲ್ಲೂಕು ಆರೋಗ್ಯ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಕರೊನಾ ಸೋಂಕಿತರ ಚಿಕಿತ್ಸೆಗಾಗಿ ಬೆಡ್ ಗಳನ್ನು ಮೀಸಲಿಡುವಂತೆ ತಿಳಿಸಲಾಗಿದೆ ಎಂದು ಸೂಚನೆ ನೀಡಲಾಗಿದೆ.
ಅವರು ಈ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಈಗಾಗಲೇ ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆ ನೀಡಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ಏ.26 ಒಳಗಾಗಿ ನೋಂದಣಿ ಮಾಡದಿದ್ದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ಅಲ್ಲಿನ ಸೌಲಭ್ಯಗಳು, ಬೆಡ್ ಗಳ ಮಾಹಿತಿಯನ್ನು ತಾಲ್ಲೂಕು ಆರೋಗ್ಯ ಅಧಿಕಾರಿಗಳು ಸಂಗ್ರಹಿಸಿದ್ದಾರೆ.
ಕೋವಿಡ್ ಸೋಂಕಿತ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವುದು ಆರೋಗ್ಯ ಸೇವಾಕರ್ತರ ಬಹು ಮುಖ್ಯ ಹೊಣೆಗಾರಿಕೆಯಾಗಿದ್ದು, ಖಾಸಗಿ ಆಸ್ಪತ್ರೆಗಳು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸರ್ಕಾರದೊಂದಿಗೆ ಸಹಕರಿಸಬೇಕು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 26 ಖಾಸಗಿ ಆಸ್ಪತ್ರೆಗಳ ಪೈಕಿ ಕೇವಲ 6 ಖಾಸಗಿ ಆಸ್ಪತ್ರೆಗಳು ಮಾತ್ರ ಇಲ್ಲಿಯವರೆಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ನೋಂದಣಿ ಮಾಡಿಕೊಂಡಿವೆ. ಉಳಿದ ಖಾಸಗಿ ಆಸ್ಪತ್ರೆಗಳು ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಅರಿತು, ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟಲು ಮತ್ತು ಜನರ ಆರೋಗ್ಯದ ಹಿತದೃಷ್ಟಿಯಿಂದ ನೋಂದಣಿಗೆ ಮುಂದಾಬೇಕು ಎಂದು ಮನವಿ ಮಾಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….