ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಬಿಡುಗಡೆ ಮಾಡಿದ ಸೋಮವಾರದ ಕೋವಿಡ್-19 ಮಾಧ್ಯಮ ವರದಿಯಲ್ಲಿ ಜಿಲ್ಲೆಯ 113 ಮಂದಿಗೆ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ
ಇಂದಿನ ವರದಿಯಲ್ಲಿ ದೇವನಹಳ್ಳಿ ತಾಲೂಕಿನಲ್ಲಿ 276. ದೊಡ್ಡಬಳ್ಳಾಪುರ 85. ನೆಲಮಂಗಲ 73 ಹಾಗೂ ಹೊಸಕೋಟೆ ತಾಲೂಕಿನಲ್ಲಿ 65 ಜನರಿಗೆ ಸೊಂಕು ದೃಢಪಟ್ಟಿದೆ. ಮತ್ತು ನೆಲಮಂಗಲ ತಾಲೂಕಿನಲ್ಲಿ ಇಬ್ಬರು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಓರ್ವ ಸೋಂಕಿನಿಂದ ಸಾವನಪ್ಪಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ 914 ಮಂದಿ ಸೋಂಕಿತರಿಗೆ ನಿಗಾ ಘಟದಲ್ಲಿಡಲಾಗಿದೆ ಎನ್ನಲಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 5071ಕ್ಕೆ ಏರಿಕೆಯಾಗಿದ್ದರೆ, 68396ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ. 113 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಆರೋಗ್ಯ ಇಲಾಖೆಯಿಂದ ತಪಾಸಣೆ ನಡೆಸಲಾಗುತ್ತಿದ್ದು, ಇಂದಿನ ವರದಿಯ ಪ್ರಕಾರ 5276 ಮಂದಿಯ ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ದೊಡ್ಡಬಳ್ಳಾಪುರದ ಆತ್ರೇಯಾ ಆಯುರ್ವೇದ ವೈದ್ಯಕೀಯ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲು: ತಾಲ್ಲೂಕಿನ ಆತ್ರೇಯಾ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರವು ನೂರು ಹಾಸಿಗೆಗಳುಳ್ಳ ಆಸ್ಪತ್ರೆಯೆಂದು ಸುಳ್ಳು ಪುರಾವೆ ನೀಡಿದ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು ಇಂದು ಭೇಟಿ ನೀಡಿ, ಪರಿಶೀಲಿಸಿದ ಸಂದರ್ಭದಲ್ಲಿ ಒಂದು ಹಾಸಿಗೆಯ ವ್ಯವಸ್ಥೆಯು ಕಾಣದ ಹಿನ್ನೆಲೆ, ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿ ಪ್ರಕರಣ ದಾಖಲಿಸಲು ಆದೇಶಿಸಿದ್ದಾರೆ
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…