ದೊಡ್ಡಬಳ್ಳಾಪುರ: ಕೋವಿಡ್-19 ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ, ನಗರದ ಪ್ರವಾಸಿ ಮಂದಿರದ ಮುಂಭಾಗ ಇಂದು ದೊಡ್ಡಬಳ್ಳಾಪುರ ತಾಲ್ಲೂಕು ಕೈಗಾರಿಕಾ ಸಂಘದ ವತಿಯಿಂದ ಕೋವಿಡ್-19 ಲಸಿಕಾ ಕೇಂದ್ರಕ್ಕೆ
ಸಾರ್ವಜನಿಕರನ್ನು ಉಚಿತವಾಗಿ ಕರೆತರುವ ವಾಹನಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಹಾಗೂ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ. ವೆಂಕಟರಮಣಯ್ಯ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನರೇಂದ್ರ ಬಾಬು, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ಡಿವೈಎಸ್ಪಿ ಟಿ. ರಂಗಪ್ಪ, ತಹಸೀಲ್ದಾರ್ ಶಿವರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಪರಮೇಶ್ವರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…