ದೊಡ್ಡಬಳ್ಳಾಪುರ: ಅಡಿಕೆ ತೋಟದಲ್ಲಿ ಅನುಮಾನಸ್ಪದವಾಗಿ ಯುವಕನೋರ್ವನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ತಾಲೂಕಿನ ದಡಿಘಟ್ಟಮಡಗು ಗ್ರಾಮದಲ್ಲಿ ನಡೆದಿದೆ.
ಮೃತನನ್ನು ತೇಜ(18) ಎಂದು ಗುರುತಿಸಲಾಗಿದ್ದು, ತೋಟದಲ್ಲಿ ತಾಯಿಯೊಂದಿಗೆ ವಾಸವಿದ್ದ ಈತನ ಶವ ಮನೆಯ ಹಿಂಬದಿಯಲ್ಲಿನ ಅಡಿಕೆ ತೋಟದಲ್ಲಿ ಅನುಮಾನಸ್ಪದವಾಗಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ.
ಈ ಕುರಿತಂತೆ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….