ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ 791 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಹೊಸದಾಗಿ 133 ಕರೊನಾ ಪ್ರಕರಣಗಳು ಹಾಗೂ 3 ಮೃತ ಪ್ರಕರಣಗಳು ಮಂಗಳವಾರ ವರದಿಯಾಗಿದೆ.
ಬುಲೆಟಿನ್ ವರದಿಯನ್ವಯ ದೊಡ್ಡಬಳ್ಳಾಪುರ ತಾಲೂಕಿನ 28 ಪುರುಷರು, 38 ಮಂದಿ ಮಹಿಳೆಯರು ಸೇರಿ 66. ದೇವನಹಳ್ಳಿ ತಾಲೂಕಿನ 15 ಪುರುಷರು, 12 ಮಹಿಳೆಯರು ಸೇರಿ 27. ಹೊಸಕೋಟೆ ತಾಲೂಕಿನ 09 ಪುರುಷರು, 13 ಮಹಿಳೆಯರು ಸೇರಿ 22 ಮತ್ತು ನೆಲಮಂಗಲ ತಾಲೂಕಿನ 10 ಪುರುಷರು, 08 ಮಹಿಳೆಯರು ಸೇರಿ 18 ಹಾಗೂ ಅನ್ಯ ಜಿಲ್ಲೆಯವರು ಸೇರಿ ಒಟ್ಟು ಜಿಲ್ಲೆಯಲ್ಲಿ 133 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಮೃತರ ವರದಿ: ದೊಡ್ಡಬಳ್ಳಾಪುರ ತಾಲೂಕಿನ 55 ವರ್ಷದ ಮಹಿಳೆ. ನೆಲಮಂಗಲ ತಾಲೂಕಿನ 72 ವರ್ಷದ ವೃದ್ಧ ಮತ್ತು ಕೋಲಾರ ಜಿಲ್ಲೆಯ 76 ವರ್ಷದ ವೃದ್ಧ ಸಾವನಪ್ಪಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ 553 ಮಂದಿ ಸೋಂಕಿತರನ್ನು ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4036ಕ್ಕೆ ಇಳಿಕೆಯಾಗಿದೆ. ಅಲ್ಲದೆ 21008 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.
ಇಂದಿನ ವರದಿಯ ಪ್ರಕಾರ 4682 ಮಂದಿಯ ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….