ದೊಡ್ಡಬಳ್ಳಾಪುರ: ತಾಲೂಕಿನಾಧ್ಯಂತ ಮಾಂಸ ಮಾರಾಟಕ್ಕೆ ಎರಡು ಗಂಟೆಗಳ ಕಾಲ ಅನುಮತಿ ನೀಡಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆದೇಶಿಸಿದ್ದಾರೆ.
ಕರೊನಾ ಪ್ರಕರಣಗಳು ಹೆಚ್ಚಿದ್ದ ಹಿನ್ನೆಲೆಯಲ್ಲಿ ಜೂ.13ರಂದು ತಾಲೂಕಿನಾಧ್ಯಂತ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಕರ್ನಾಟಕ ಪೌಲ್ಟ್ರೀ ಟ್ರೇಡರ್ಸ್ ಅಸೋಸಿಯೇಷನ್ ಅವರು ಕೋಳಿ ಮಾಂಸ ಮಾರಾಟ ಅಗತ್ಯ ವಸ್ತುಗಳ ಸೇವೆಯ ಅಡಿಯಲ್ಲಿ ಬರುವುದರಿಂದ ಕೋಳಿ ಮಾಂಸ ಮಾರಾಟಕ್ಕೆ ಮಧ್ಯಾಹ್ನ 2ಗಂಟೆಯವರೆಗೂ ಅವಕಾಶ ನೀಡುವಂತೆ ಮನವಿ ಸಲ್ಲಿಸಿದ್ದರು.
ಈ ಹಿನ್ನಲೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಕಡಿಮೆಯಾಗಿರುವುದರಿಂದ, ಜೂ.20ರಿಂದ ಬೆಳಗ್ಗೆ 6ರಿಂದ ಬೆಳಗ್ಗೆ 8ರವರೆಗೆ ಎರಡು ಗಂಟೆಗಳ ಕಾಲ ತಾಲೂಕಿನಾಧ್ಯಂತ ಚಿಕನ್ ಮತ್ತು ಮಟನ್ ಮತ್ತು ಎಲ್ಲಾ ತರಹದ ಮಾಂಸದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆದೇಶ ನೀಡಿದ್ದಾರೆ. ಆದರೆ ಉಳಿದ ನಿರ್ಭಂದಗಳು ಜೂ.21 ರವರೆಗೆ ಮುಂದುವರೆಯಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….