ಬೆಂ.ಗ್ರಾ.ಜಿಲ್ಲೆ: ಈಗಾಗಲೇ ರಾಜ್ಯ ಸರ್ಕಾರ 16 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಿ ಆದೇಶ ಹೊರಿಡಿಸಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿ 6 ಜಿಲ್ಲೆಗಳನ್ನು ಮತ್ತೆ ಅನ್ ಲಾಕ್ ಮಾಡಲಾಗಿದೆ.
ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳನ್ನು ಅನ್ ಲಾಕ್ ಮಾಡಿ ಆದೇಶಿಸಲಾಗಿದೆ.
ಮೊದಲ ಹಂತದಲ್ಲಿ ಉತ್ತರಕನ್ನಡ, ಬೆಳಗಾವಿ, ಮಂಡ್ಯ,ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿಬಿಎಂಪಿ ಸೇರಿ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳನ್ನು ಅನ್ ಲಾಕ ಮಾಡಲಾಗಿತ್ತು.
ಬೆಳಿಗ್ಗೆ 5ರಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಶನಿವಾರ ಮುಖ್ಯಮಂತ್ರಿಗಳು ಅವಕಾಶ ಕಲ್ಪಿಸಿದ್ದರು. ಇದೀಗ ಮತ್ತೆ ಆರು ಜಿಲ್ಲೆಗೆ ಈ ನಿಯಮವನ್ನು ವಿಸ್ತರಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..