ಬೆಂ.ಗ್ರಾ.ಜಿಲ್ಲೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ 2021-22ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ದೇವನಾಯಕನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6 ರಿಂದ 9ನೇ ತರಗತಿಗಳಿಗೆ(ಆಂಗ್ಲ ಮಾಧ್ಯಮ) ಸಹ ಶಿಕ್ಷಣ ಪ್ರವೇಶ ಪಡೆಯಲು ಅಲ್ಪಸಂಖ್ಯಾತರ ಸಮುದಾಯ ಮತ್ತು ಇತರೆ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸದರಿ ಶಾಲೆಯಲ್ಲಿ 6 ರಿಂದ 9ನೇ ತರಗತಿಗೆ ಇರುವ ಒಟ್ಟು 200 ಸಂಖ್ಯಾಬಲದಲ್ಲಿ ತರಗತಿವಾರು 50 ಸಂಖ್ಯಾಬಲವಿದೆ. 6ನೇ ತರಗತಿಗೆ 50 ಸೀಟುಗಳು ಖಾಲಿ ಇದೆ.
ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75% ರಷ್ಟು ಮತ್ತು ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ.25% ರಷ್ಟು ಸ್ಥಾನ ಮೀಸಲಿರಿಸಲಾಗಿದ್ದು, 7 ರಿಂದ 9ನೇ ತರಗತಿಗೆ ಪ್ರವೇಶವನ್ನು ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು.
ವಿದ್ಯಾರ್ಥಿಗಳಿಗೆ ಪ್ರವೇಶವು ಉಚಿತವಾಗಿದ್ದು, ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಊಟ, ಮಂಚ, ಹಾಸಿಗೆ, ಹೊದಿಗೆ, ಪಠ್ಯಪುಸ್ತಕ, ಸಮವಸ್ತ್ರ, ಲೇಖನ ಸಾಮಗ್ರಿ, ಗ್ರಂಥಾಲಯ, ಕಂಪ್ಯೂಟರ್ & ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸಲಾಗುವುದು. ಆಸಕ್ತ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅರ್ಜಿಯೊಂದಿಗೆ ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ, ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯ ನಕಲು, ವಿದ್ಯಾರ್ಥಿಯ ಪೋಟೋ, ರೇಷನ್ ಕಾರ್ಡ್ ಇತ್ಯಾದಿಗಳನ್ನು ಲಗತ್ತಿಸಿ ದೇವನಹಳ್ಳಿ ತಾಲ್ಲೂಕಿನ ದೇವನಾಯಕನಹಳ್ಳಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಿಗೆ 2021ರ ಜುಲೈ 31ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಪ್ರಾಂಶುಪಾಲರು, ದೇವನಹಳ್ಳಿ ತಾಲ್ಲೂಕಿನ ದೇವನಾಯಕನಹಳ್ಳಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ. ಸಂ.: 8310397004, 7411893987, 9986417499,
ವಿಜಯಪುರದ ದೇವನಹಳ್ಳಿ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ದೂ.ಸಂ.: 080-27682882, ಮೊ.ಸಂ.:9108360071, ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.216, 2ನೇ ಮಹಡಿ, ಜಿಲ್ಲಾಧಿಕಾರಿಗಳ ಹೊಸ ಸಂಕೀರ್ಣ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110, ದೂ.ಸಂ.: 080-29787455 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..