ಬೆಂ.ಗ್ರಾ.ಜಿಲ್ಲೆ: ಕೋವಿಡ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ 18 ವರ್ಷದೊಳಗಿನ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಬಾಲಹಿತೈಷಿ ಯೋಜನೆಯಡಿ ಮಕ್ಕಳನ್ನು ಬೆಳೆಸಲು ಉತ್ಸುಕರಾದವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇಬ್ಬರು ಪೋಷಕರನ್ನು ಅಥವಾ ಪೋಷಕರನ್ನು ಕಳೆದುಕೊಂಡು ಮಾನಸಿಕ ಅಘಾತಕ್ಕೆ ಒಳಗಾಗಿರುವ ಮಕ್ಕಳನ್ನು ಅದರಿಂದ ಹೊರತರುವುದು ಈ ಯೋಜನೆಯ ಉದ್ದೇಶವಾಗಿದೆ.
ಮಕ್ಕಳನ್ನು ಬೆಳೆಸಲು ಉತ್ಸುಕರಾದವರು ದೀರ್ಘಕಾಲಿಕವಾಗಿ ಶೈಕ್ಷಣಿಕ, ಸಾಮಾಜಿಕವಾಗಿ ಸಾಮರ್ಥ್ಯ ಸಾಧಿಸಲು ಸಹಾಯ ಮಾಡಲು ಮತ್ತು ಮಾರ್ಗದರ್ಶನ ನೀಡಲು ಆಸಕ್ತಿ ಹೊಂದಿರಬೇಕು.
ನೋಂದಣಿಗೆ ಅರ್ಜಿ ನಮೂನೆಯು ಮಕ್ಕಳ ರಕ್ಷಣಾ ನಿರ್ದೇಶನಾಲಯದ ವೆಬ್‌ಸೈಟ್ http://icps.karnataka.gov.in ನಲ್ಲಿ ಲಭ್ಯವಿದ್ದು, ಇಚ್ಛೆಯುಳ್ಳ ಮಾರ್ಗದರ್ಶಕರು ಈ ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿ ದೂರವಾಣಿ ಸಂಖ್ಯೆ: 08029560034, ಮೊಬೈಲ್ ಸಂಖ್ಯೆ: 8095951304, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರ ಮೊಬೈಲ್ ಸಂಖ್ಯೆ: 8496042939, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ಆಪ್ತ ಸಮಾಲೋಚನಾ ಸಂಖ್ಯೆ: 14499, ಮಕ್ಕಳ ಸಹಾಯವಾಣಿ ಸಂಖ್ಯೆ: 1098 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..